ಶಿವಮೊಗ್ಗ | ಲೈಂಗಿಕ ದೌರ್ಜನ್ಯದಿಂದ ಬೇಸತ್ತು ಬಾಲಕಿ ಆತ್ಮಹತ್ಯೆ ಪ್ರಕರಣ; ಆರೋಪಿಗೆ 20 ವರ್ಷ ಜೈಲು, 1.25 ಲಕ್ಷ ರೂ. ದಂಡ

Update: 2023-11-06 05:35 GMT

ಸಾಂದರ್ಭಿಕ ಚಿತ್ರ

ಶಿವಮೊಗ್ಗ,ನ.6: ಲೈಂಗಿಕ ದೌರ್ಜನ್ಯ ಎಸಗಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಆತ್ಮಹತ್ಯೆಗೆ ಕಾರಣಕರ್ತನಾದ ಯುವಕನಿಗೆ, 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಶಿವಮೊಗ್ಗದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್ ಟ್ರ್ಯಾಕ್ ವಿಶೇಷ ಕೋರ್ಟ್ ತೀರ್ಪು ನೀಡಿದೆ.

23 ವರ್ಷದ ಯುವಕ ಜೈಲು ಶಿಕ್ಷೆಗೆ ಗುರಿಯಾದವನಾಗಿದ್ದಾನೆ. ಶಿಕ್ಷೆಯ ಜೊತೆಗೆ 1.25 ಲಕ್ಷ ರೂ. ದಂಡ ವಿಧಿಸಲಾಗಿದೆ. ದಂಡ ಕಟ್ಟಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 6 ತಿಂಗಳ ಸಾದಾ ಜೈಲು ಶಿಕ್ಷೆ ಅನುಭವಿಸುವಂತೆ ತೀರ್ಪಿನಲ್ಲಿ ತಿಳಿಸಲಾಗಿದೆ. 2020ರಲ್ಲಿ ಘಟನೆ ನಡೆದಿತ್ತು. ತೀರ್ಥಹಳ್ಳಿ ತಾಲೂಕು ಮೂಲದ ಯುವಕನ ಲೈಂಗಿಕ ದೌರ್ಜನ್ಯದಿಂದ ಬೇಸತ್ತು, 16 ವರ್ಷದ ಬಾಲಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಸಂಬಂಧ ಮೃತ ಬಾಲಕಿಯ ತಂದೆ ರಿಪ್ಪನ್‌ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಈ ಕುರಿತಂತೆ ಹೊಸನಗರ ಸರ್ಕಲ್ ಇನ್‌ಸ್ಪೆಕ್ಟರ್ ಆಗಿದ್ದ ಬಿ.ಸಿ.ಗಿರೀಶ್ ಅವರು ಪ್ರಕರಣದ ತನಿಖೆ ನಡೆಸಿದ್ದರು. ಯುವಕನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ (ಚಾರ್ಜ್ ಶೀಟ್) ದಾಖಲಿಸಿದ್ದರು.

ನ್ಯಾಯಾಧೀಶೆ ಲತಾ ಅವರು ನ4ರಂದು ಈ ತೀರ್ಪು ನೀಡಿದ್ದಾರೆ. ಮೃತ ಬಾಲಕಿಯ ಕುಟುಂಬಕ್ಕೆ 17 ಲಕ್ಷ ರೂ. ಪರಿಹಾರ ನೀಡುವಂತೆ ಸರಕಾರಕ್ಕೆ ಆದೇಶಿಸಿದ್ದಾರೆ. ಸರಕಾರದ ಪರವಾಗಿ ಸರಕಾರಿ ಅಭಿಯೋಜಕರಾದ ಹರಿಪ್ರಸಾದ್ ಹಾಗೂ ಮಮತಾ ಅವರು ವಾದ ಮಂಡಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News