ಶಿವಮೊಗ್ಗ | ಬೈಕ್- ಲಾರಿ ಮಧ್ಯೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Update: 2024-01-10 06:01 GMT

ಶಿವಮೊಗ್ಗ, ಜ.10: ಬೈಕ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹೊಸನಗರ ತಾಲೂಕಿನ ಮಾವಿನಹೊಳೆ ಕ್ರಾಸ್ ಬಳಿ ನಡೆದಿದೆ.

ಮೃತನನ್ನು ಗರ್ತಿಕೆರೆ ಮೂಲದ ಯುವಕ ಎಂದು ಗುರುತಿಸಲಾಗಿದ್ದು, ಆತನ ಗುರುತು ಪತ್ತೆಯಾಗಲಿಲ್ಲ.

ಹೊಸ ನಗರ ಕಡೆಯಿಂದ ಸಾಗರಕ್ಕೆ ತೆರಳುತ್ತಿದ್ದ ಕಂಟೈನರ್ ಲಾರಿ ಮತ್ತು ಸಾಗರ ಕಡೆಯಿಂದ ಹೊಸನಗರ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಹೊಸ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News