ಶಿಗ್ಗಾಂವಿ ಉಪ ಚುನಾವಣೆ | ಮುಸ್ಲಿಮ್ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಝಮೀರ್ ಅಹ್ಮದ್ ಒತ್ತಾಯ
Update: 2024-10-22 15:35 GMT
ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಹಿನ್ನೆಲೆ ಯಲ್ಲಿ ಬೆಂಗಳೂರಿಗೆ ಆಗಮಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆ ವಾಲಾ ಅವರನ್ನು ಭೇಟಿ ಮಾಡಿದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್, ಶಿಗ್ಗಾಂವಿ ಕ್ಷೇತ್ರಕ್ಕೆ ಮುಸ್ಲಿಮ್ ಅಭ್ಯರ್ಥಿಗೆ ಟಿಕೆಟ್ ನೀಡಲು ಒತ್ತಾಯಿಸಿದರು.
ಕಳೆದ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಮುಸ್ಲಿಮ್ ಸಮುದಾಯ ಕಾಂಗ್ರೆಸ್ ಪರ ನಿಂತಿದೆ. ಈ ಬಾರಿ ಶಿಗ್ಗಾಂವಿ ಕ್ಷೇತ್ರದ ಟಿಕೆಟ್ ಮುಸ್ಲಿಮ್ ಸಮುದಾಯಕ್ಕೆ ಬೇಕೇ ಬೇಕು ಎಂದು ಝಮೀರ್ ಅಹ್ಮದ್ ಖಾನ್ ಪಟ್ಟು ಹಿಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೂ ಈ ಬಗ್ಗೆ ಝಮೀರ್ ಅಹ್ಮದ್ ಖಾನ್ ನೇತೃತ್ವದಲ್ಲಿ ಮುಸಿಮ್ ಜನಪ್ರತಿನಿಧಿಗಳ ನಿಯೋಗ ಬೇಡಿಕೆ ಸಲ್ಲಿಸಿತ್ತು.