ಶಿಗ್ಗಾಂವಿ ಉಪಚುನಾವಣೆ | ನಾಮಪತ್ರ ಹಿಂಪಡೆದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಅಜ್ಜಂಪೀರ್‌ ಖಾದ್ರಿ

Update: 2024-10-30 10:06 GMT

ಹಾವೇರಿ: ಉಪಚುನಾವಣೆ ನಡೆಯಲಿರುವ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ವಿರುದ್ಧ ಬಂಡಾಯ ಎದ್ದು  ಪಕ್ಷೇತರರಾಗಿ ಸಲ್ಲಿಸಿದ್ದ ನಾಮಪತ್ರವನ್ನು ಅಜ್ಜಂಪೀರ್‌ ಖಾದ್ರಿ ಇಂದು(ಅ.30) ವಾಪಸ್‌ ಪಡೆದಿದ್ದಾರೆ.

ಮಂಗಳವಾರ ರಾತ್ರಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಬಂದಿದ್ದ ಅಜ್ಜಂಪೀರ್‌ ಖಾದ್ರಿ ಅವರು, ಸಚಿವ ಝಮೀರ್ ಅಹ್ಮದ್ ಹಾಗೂ ಶಿವಾನಂದ ಪಾಟೀಲ್ ಜೊತೆಯಲ್ಲಿ ಬುಧವಾರ ಬೆಳಿಗ್ಗೆ ಚುನಾವಣಾಧಿಕಾರಿ ಕಚೇರಿಗೆ ತೆರಳಿ, ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿಯೇ ನಾಮಪತ್ರ ವಾಪಸ್‌ ಪಡೆದಿದ್ದಾರೆ.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅಜ್ಜಂಪೀರ್ ಖಾದ್ರಿ ಅವರು "ಪಕ್ಷದ ಮುಂದೆ ನಾನು ಯಾವುದೇ ಬೇಡಿಕೆಯನ್ನು ಇಟ್ಟಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರದ ಯೋಜನೆಗಳು ಜನಪರವಾಗಿವೆ. ಸಿದ್ದರಾಮಯ್ಯ ಅವರ ಶಿಷ್ಯ ನಾನು. ಅವರ ಮಾರ್ಗದರ್ಶನದಲ್ಲಿ ಮುಂದುವರಿಯುವೆ" ಎಂದು ಹೇಳಿದರು.

Full View

Tags:    

Writer - ವಾರ್ತಾಭಾರತಿ

contributor

Editor - Thouheed

contributor

Byline - ವಾರ್ತಾಭಾರತಿ

contributor

Similar News