ಅಕಾಡೆಮಿ-ಪ್ರಾಧಿಕಾರದ ಅಧ್ಯಕ್ಷರ ಜತೆ ಡಿಸಿಎಂ ಸಭೆಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ : ಶಿವರಾಜ್ ತಂಗಡಗಿ

Update: 2024-06-21 15:46 GMT

Photo: fb.com/Shivarajtangadagi

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಕಾಡೆಮಿ ಹಾಗೂ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸದಸ್ಯರ ಸಭೆ ನಡೆಸಲು ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ.

ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾತನಾಡಿದ ಅವರು, ಸಿಎಂ, ಡಿಸಿಎಂ ಅವರಿಗೆ ಸಭೆ ನಡೆಸಿ ಸೂಚನೆ ನೀಡುವ ಅಧಿಕಾರ ಇದೆ. ವಿಶೇಷವಾಗಿ ಡಿ.ಕೆ.ಶಿವಕುಮಾರ್ ಅವರು ಈ ಹಿಂದೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿ ಕೂಡ ಕಾರ್ಯ ನಿರ್ವಹಿಸಿದ್ದರು. ಸಾಹಿತಿಗಳ ಬಗ್ಗೆ ನಾನು ಯಾವುದೇ ವ್ಯಾಖ್ಯಾನವನ್ನು ಹೊಂದಿಲ್ಲ. ಅನಗತ್ಯವಾಗಿ ಅದರ ಬಗ್ಗೆ ಚರ್ಚೆ ಮಾಡುವುದು ಬೇಡ. ನಾನು ರಾಜಕಾರಣ ಮಾತನಾಡಲು ಹೋಗುವುದಿಲ್ಲ ಎಂದು ಹೇಳಿದರು.

ಈ ಹಿಂದಿನ ಸರ್ಕಾರದಲ್ಲಿ ಯಾರೆಲ್ಲಾ ಅಕಾಡೆಮಿಗಳ ಅಧ್ಯಕ್ಷರ ಸಭೆ ನಡೆಸಿದ್ದರು ಎಂದು ಹೇಳುತ್ತಾ ಹೋದರೆ ಅದು ರಾಜಕೀಯವಾಗಿದೆ. ಹೀಗಾಗಿ ಈ ವಿಚಾರದಲ್ಲಿ ರಾಜಕಾರಣ ಮಾಡುವುದು ಬೇಡ ಎಂದ ಅವರು, ಸರ್ಕಾರ ಘನತೆ ಹೆಚ್ಚಿಸುವಲ್ಲಿ ಸಾಹಿತಿಗಳ ಪಾತ್ರ ಮಹತ್ವವಿರುವ ಬಗ್ಗೆ ಅವರು ಸಭೆ ನಡೆಸಿ ಸಲಹೆ ನೀಡಿದರು.

ಹಿಂದಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ನೀಡಲಾಗುವ ವಿವಿಧ ಪ್ರಶಸ್ತಿಗಳನ್ನು ನೀಡಲಿಲ್ಲ. ಘೋಷಣೆ ಮಾಡಿದ್ದವರಿಗೂ ಪ್ರಶಸ್ತಿ ಪ್ರದಾನಮಾಡಿರಲ್ಲ. ನಾನು ಸಚಿವನಾದ ಬಳಿಕ ಆ ಸರ್ಕಾರ ಘೋಷಣೆ ಮಾಡಿದವರಿಗೆ ಬದಲಾವಣೆ ಮಾಡದೆ ಪ್ರಶಸ್ತಿ ನೀಡಿದ್ದೇನೆ. ಇದು ನಮ್ಮ ಸಾಂಸ್ಕೃತಿಕ ಬದ್ಧತೆ ಎಂದು ನುಡಿದರು.

ಶೀಘ್ರ ಸಮನ್ವಯ ಸಮಿತಿ ರಚನೆ: 'ಬಸವಣ್ಣ ಅವರಿಗೆ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ ಅವರ ತತ್ವ ಸಿದ್ದಾಂತವನ್ನು ಪ್ರಚಾರಪಡಿಸಲು ಹಾಗೂ ಕರ್ನಾಟಕವನ್ನು ಹೆಸರಿಸಿ 50 ವರ್ಷದ ತುಂಬಿದ ವಾರ್ಷಿಕ ಅನುಷ್ಠಾನಗೊಳಿಸಬೇಕಾದ ಕಾರ್ಯಕ್ರಮಗಳನ್ನು ರೂಪಿಸಲು ಅಕಾಡೆಮಿಗಳ ಅಧ್ಯಕ್ಷರು ಹಾಗೂ ಸದಸ್ಯರನ್ನೊಳಗೊಂಡ ಸಮನ್ವಯ ಸಮಿತಿ ರಚನೆ ಮಾಡಲಾಗುವುದು ಎಂದು ಹೇಳಿದರು.

ಮಂಡ್ಯದಲ್ಲಿಯೇ ಸಾಹಿತ್ಯ ಸಮ್ಮೇಳನ: ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಿ ನಿಗದಿಪಡಿಸಲಾಗಿದೆ ಎಂದು ಶಿವರಾಜ್ ತಂಗಡಗಿ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News