ಡಾ.ರತ್ನಮ್ಮ, ರಾಜಶೇಖರ ತಳವಾರ ಸೇರಿ ಐವರಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ

Update: 2024-10-16 16:56 GMT

ರತ್ನಮ್ಮ ಬಿ. ಸೋಗಿ,ಕೆ.ಎಸ್ ಮೃತ್ಯಂಜಯ,ರಾಜಶೇಖರ್ ತಳವಾರ,ಕಿಲಾರಿ ಜೋಗಯ್ಯ,ಡಾ.ರತ್ನಮ್ಮ ಎಸ್

ಬೆಂಗಳೂರು : ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವತಿಯಿಂದ ನಾಳೆ(ಅ.17) ಬೆಳಗ್ಗೆ 9.30 ಕ್ಕೆ ಶಾಸಕರ ಭವನದ ಆವರಣದಲ್ಲಿರುವ ಶ್ರೀ ಮಹರ್ಷಿ ವಾಲ್ಮೀಕಿ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ವಾಲ್ಮೀಕಿ ಜಯಂತಿ ಆಚರಿಸಲಾಗುತ್ತದೆ. ನಂತರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ 2024ನೇ ಸಾಲಿನ ವಾಲ್ಮೀಕಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಗಣ್ಯರು ಮತ್ತು ಸಾರ್ವಜನಿಕರು ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಮುಖಂಡರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಈ ಬಾರಿ ವಿವಿಧ ಕ್ಷೇತ್ರಗಳ ಐವರು ಸಾಧಕರು ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಅದರಲ್ಲಿ ಬುಡಕಟ್ಟು ಕ್ಷೇತ್ರದಿಂದ ಚಿತ್ರದುರ್ಗ ಜಿಲ್ಲೆಯ ಕಿಲಾರಿ ಜೋಗಯ್ಯ, ಸಮಾಜ ಸೇವೆ ಕ್ಷೇತ್ರದಿಂದ ಚಾಮರಾಜನಗರ ಜಿಲ್ಲೆಯ ಡಾ.ರತ್ನಮ್ಮ ಎಸ್., ರಂಗಭೂಮಿ ಕ್ಷೇತ್ರದಿಂದ ವಿಜಯನಗರ ಜಿಲ್ಲೆಯ ರತ್ನಮ್ಮ ಬಿ. ಸೋಗಿ, ಸಾಮಾಜಿಕ ಕ್ಷೇತ್ರದಿಂದ ಬೆಳಗಾವಿ ಜಿಲ್ಲೆಯ ರಾಜಶೇಖರ್ ತಳವಾರ ಹಾಗೂ ಬೆಂಗಳೂರಿನ ಕೆ.ಎಸ್ ಮೃತ್ಯಂಜಯ ಆಯ್ಕೆಯಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಬೆಂಗಳೂರು, ಮೈಸೂರು, ಬೆಳಗಾವಿ, ಕಲಬುರಗಿ ಕಂದಾಯ ವಿಭಾಗಗಳು ಹಾಗೂ ಬೆಂಗಳೂರು ಕೇಂದ್ರ ಸ್ಥಾನದಿಂದ ತಲಾ ಒಬ್ಬರಂತೆ ಒಟ್ಟು ಐದು ಸಾಧಕರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಈ ಸಾಧಕರಿಗೆ ತಲಾ 20 ಗ್ರಾಂ ಬಂಗಾರದ ಪದಕ ಹಾಗೂ ಐದು ಲಕ್ಷ ರೂ. ನಗದು ಅನ್ನು ನೀಡಿ ಗೌರವಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

2024ನೇ ಸಾಲಿಗೆ ಮಹರ್ಷಿ ವಾಲ್ಮೀಕಿ ಇವರ ಸ್ಮರಣಾರ್ಥ ನೀಡುವ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧಕರನ್ನು ಆಯ್ಕೆ ಮಾಡಲು ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ. ಎಚ್.ಮ್ಲಲೇಶಪ್ಪ ಅವರ ನೇತೃತ್ವದಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿಯು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಐವರು ಗಣ್ಯರನ್ನು ಗುರುತಿಸಿ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲು ಶಿಫಾರಸು ಮಾಡಿತ್ತು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News