ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ? | ವಕೀಲರ ತಂಡದ ಜತೆ ಸಿದ್ದರಾಮಯ್ಯ ಮಹತ್ವದ ಚರ್ಚೆ

Update: 2024-08-06 09:56 GMT

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ(ಮುಡಾ) ನಡೆದಿದೆ ಎನ್ನಲಾದ ಅಕ್ರಮ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಬಹುದು ಎಂಬ ಚರ್ಚೆ ನಡೆಯುತ್ತಿದೆ. ಈ ಮಧ್ಯೆ ಸಿದ್ದರಾಮಯ್ಯ ನಿವಾಸದಲ್ಲಿ ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಅವರಿಂದಲೇ ಕಾನೂನು ಹೋರಾಟಕ್ಕೆ ಸಿದ್ದತೆ ಆರಂಭವಾಗಿದೆ ಎಂದು ತಿಳಿದು ಬಂದಿದೆ.

ಪ್ರಕರಣ ಸಂಬಂಧ ಹತ್ತು ಹಿರಿಯ ವಕೀಲರ ಜತೆ ಸಿಎಂ ಸಿದ್ದರಾಮಯ್ಯ ಗಂಭೀರ ಚರ್ಚೆ ನಡೆಸಿದ್ದು, ವಕೀಲರಿಂದ ಕಾನೂನು ಸಲಹೆ ಪಡೆದು ಮುಂದಿನ ನಡೆ ಕುರಿತು ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ರಾಜ್ಯಪಾಲರ ನಡೆ ಪ್ರ‍ಶ್ನಿಸಿ ಕಾನೂನು ಹೋರಾಟಕ್ಕೆ ಸಿದ್ದತೆ ನಡೆಯುತ್ತಿದ್ದು, ಜನಪ್ರತಿನಿಧಿಗಳ ಹಾಗೂ ಲೋಕಾಯುಕ್ತ ಕೋರ್ಟ್, ಸುಪ್ರೀಂ ಕೋರ್ಟ್‌ವರೆಗೂ ವಕೀಲರ ತಂಡ ಕಾನೂನು ಹೋರಾಟಕ್ಕೆ ಸಿದ್ದತೆ ಮಾಡಿಕೊಂಡಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News