ನಿಮ್ಮ ಮೇಲೆ ರೌಡಿಶೀಟರ್ ಏಕೆ ತೆರೆಯಬಾರದು?: ಸಿಎಂ ಸಿದ್ದರಾಮಯ್ಯರಿಗೆ ಬಿಜೆಪಿ ಪ್ರಶ್ನೆ

Update: 2025-04-29 19:01 IST
ನಿಮ್ಮ ಮೇಲೆ ರೌಡಿಶೀಟರ್ ಏಕೆ ತೆರೆಯಬಾರದು?: ಸಿಎಂ ಸಿದ್ದರಾಮಯ್ಯರಿಗೆ ಬಿಜೆಪಿ ಪ್ರಶ್ನೆ
  • whatsapp icon

ಬೆಂಗಳೂರು : ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ನಿಮ್ಮ ಗೂಂಡಾಗಿರಿಗೆ ಕೊನೆಯೆಂದು? ನಿಮ್ಮ ಮೇಲೆ ರೌಡಿಶೀಟರ್ ಏಕೆ ತೆರೆಯಬಾರದು?’ ಎಂದು ಪ್ರತಿಪಕ್ಷ ಬಿಜೆಪಿ ಇಂದಿಲ್ಲಿ ಖಾರವಾಗಿ ಪ್ರಶ್ನೆ ಮಾಡಿದೆ.

ಮಂಗಳವಾರ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿದ ಬಿಜೆಪಿ, ‘ಮುಖ್ಯಮಂತ್ರಿ ಕುರ್ಚಿಯ ವ್ಯಾಲಿಡಿಟಿ ಅಂತ್ಯಕ್ಕೆ ಸಮೀಪಿಸುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮಮಯ್ಯ ಅವರಿಗೆ ಹತಾಶೆ ಬಹುವಾಗಿ ಕಾಡುತ್ತಿದೆ. ಸಾರ್ವಜನಿಕ ಜೀವನದಲ್ಲಿದ್ದೇನೆ ಎಂಬ ಪರಿಜ್ಞಾನವೂ ಇಲ್ಲವೆಂಬಂತೆ ಸಿದ್ದರಾಮಯ್ಯ ವರ್ತಿಸುತ್ತಿದ್ದಾರೆ ಎಂದು ಟೀಕಿಸಿದೆ.

‘ಮನೆಮಂದಿಯ ಮೇಲೆ ರೇಗಾಡುವ ಹಾಗೆ ಸರಕಾರಿ ಅಧಿಕಾರಿಗಳ ಮೇಲೆ ಸಿದ್ದರಾಮಯ್ಯ ರೇಗಾಡುತ್ತಿದ್ದಾರೆ, ಪೊಲೀಸ್ ಅಧಿಕಾರಿಯ ಮೇಲೆ ಕೈ ಎತ್ತುತ್ತಿದ್ದಾರೆ, ಮಹಿಳೆಯರೊಂದಿಗೆ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದಾರೆ. ದರ್ಪದಿಂದ ಸರಕಾರಿ ಅಧಿಕಾರಿಗಳೊಂದಿಗೆ ನಡೆದುಕೊಳ್ಳುತ್ತಿರುವುದು ಮುಖ್ಯಮಂತ್ರಿ ಕುರ್ಚಿಗೆ ಮಾಡುತ್ತಿರುವ ಅವಮಾನವಾಗಿದೆ ಎಂದು ಬಿಜೆಪಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News