ಕೇಂದ್ರ ಸರಕಾರದ ತೆರಿಗೆ ಹಂಚಿಕೆ ತಾರತಮ್ಯದ ವಿರುದ್ಧ 8 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸಿದ್ದರಾಮಯ್ಯ ಪತ್ರ

Update: 2024-09-11 18:05 GMT

ಬೆಂಗಳೂರು : ಕೇಂದ್ರ ಸರಕಾರದ ತೆರಿಗೆ ಹಂಚಿಕೆ ತಾರತಮ್ಯದ ವಿರುದ್ಧ ನೆರೆಯ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಕೇಂದ್ರ ಸರಕಾರದ ಅನ್ಯಾಯದ ತೆರಿಗೆ ಹಂಚಿಕೆ ಕುರಿತು ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಗುಜರಾತ್, ಹರಿಯಾಣ ಮತ್ತು ಪಂಜಾಬ್ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಜಿಎಸ್ಡಿಪಿ ಹೆಚ್ಚಿರುವ ರಾಜ್ಯಗಳು ತಮ್ಮ ಆರ್ಥಿಕ ಕಾರ್ಯಕ್ಷಮತೆಗಾಗಿ ಹಿನ್ನಡೆ ಅನುಭವಿಸುತ್ತಿವೆ. ಈ ರಾಜ್ಯಗಳು ಕಡಿಮೆ ತೆರಿಗೆ ಹಂಚಿಕೆಗಳನ್ನು ಪಡೆಯುತ್ತಿವೆ. ಈ ಅನ್ಯಾಯವು ಪರಸ್ಪರ ಸಹಕಾರಿಯಾಗಬೇಕಾದ ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ. ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳ ಆರ್ಥಿಕ ಸ್ವಾಯತ್ತತೆಗೆ ಧಕ್ಕೆ ತರುತ್ತಿದೆ ಎಂದು ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.

ಹಣಕಾಸು ಆಯೋಗವು ಈ ಬಗ್ಗೆ ಯೋಚಿಸಿ, ತೆರಿಗೆ ಸಂಗ್ರಹಿಸಲು ಉತ್ತೇಜನ ನೀಡುವ ಮಾರ್ಪಾಡುಗಳನ್ನು ಮಾಡಬೇಕು. ಒಕ್ಕೂಟ ವ್ಯವಸ್ಥೆಯಲ್ಲಿನ ಈ ಸಮಸ್ಯೆಗಳ ಕುರಿತು ಒಟ್ಟಾಗಿ ಚರ್ಚಿಸಲು ಬೆಂಗಳೂರಿನಲ್ಲಿ ನಡೆಯುವ ಸಮಾವೇಶಕ್ಕೆ ನೆರೆಯ ರಾಜ್ಯಗಳ ಮುಖ್ಯಮಂತ್ರಿಗಳನ್ನು ಆಹ್ವಾನಿಸುತ್ತಿರುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News