ಜನವರಿ ವೇಳೆ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆ: ಬಿಜೆಪಿ ಶಾಸಕ ಯತ್ನಾಳ್

Update: 2023-09-17 16:18 IST
ಜನವರಿ ವೇಳೆ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆ: ಬಿಜೆಪಿ ಶಾಸಕ ಯತ್ನಾಳ್
  • whatsapp icon

ಹುಬ್ಬಳ್ಳಿ: ʼಮುಂದಿನ ಜನವರಿ ವೇಳೆಗೆ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆಯಾಗಲಿದೆ. ಕಾಂಗ್ರೆಸ್ ಪಕ್ಷದವರೇ ಅವರ ಸರಕಾರವನ್ನು ಬೀಳಿಸಲಿದ್ದಾರೆʼ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ. 

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼʼನಾವೇ ನೇರವಾಗಿ ಸಿಎಂ ಆಗಬಹುದು ಅಂತಾ ವಿರೋಧ ಪಕ್ಷದ ನಾಯಕನನ್ನ ಇದುವರೆಗೂ ಆಯ್ಕೆ ಮಾಡಿಲ್ಲ. ನೇರವಾಗಿ ನಮ್ಮ ಪಕ್ಷದವರೇ ಸಿಎಂ ಯಾಕಾಗಬಾರದು?ʼʼ ಎಂದು ಪ್ರಶ್ನಿಸಿದರು.

ಸಿಎಂ ಸಿದ್ಧರಾಮಯ್ಯ ವಿರುದ್ಧ ಬಿ.ಕೆ.ಹರಿಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು,  ʼʼಹರಿಪ್ರಸಾದ್ ಹಿರಿಯರು, ಅವರಿಗೆ ನೋವಿದೆ. ಹೀಗಾಗಿ ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಬಿ.ಕೆ.ಹರಿಪ್ರಸಾದ್ ಯಾರ ಕುಮ್ಮಕ್ಕಿನಿಂದ ಮಾತನಾಡುತ್ತಿದ್ದಾರೆ? ಸಿದ್ಧರಾಮಯ್ಯ ಅವರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸಲು ಈ ತಂತ್ರ ನಡೆಸಿದ್ದಾರೆ. ವೇಟಿಂಗ್ ಸಿಎಂ ಕುಮ್ಮಕ್ಕಿನಿಂದ ಹರಿಪ್ರಸಾದ್ ಅಸಮಾಧಾನ ಹೊರಹಾಕ್ತಿದಾರೆ. ಹರಿಪ್ರಸಾದ್ ಅವರನ್ನ ಕೇವಲ‌ ಅಸ್ತ್ರವಾಗಿ ಬಳಸಿಕೊಳ್ಳಲಾಗ್ತಿದೆʼʼ ಎಂದು ದೂರದರು. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News