ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೂ ಕುಮಾರಸ್ವಾಮಿಯವರ ನಿದ್ರೆ-ನೆಮ್ಮದಿ ಹಾರಿ ಹೋಗಿದೆ‌: ಸಚಿವ ದಿನೇಶ್ ಗುಂಡೂರಾವ್

Update: 2023-08-06 10:00 GMT

ಬೆಂಗಳೂರು: ''ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ನಿದ್ರೆ-ನೆಮ್ಮದಿ ಹಾರಿ ಹೋಗಿದೆ‌'' ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್​ ಗುಂಡೂರಾವ್ ಟೀಕಿಸಿದ್ದಾರೆ.

ರಾಜ್ಯ ಸರಕಾರದ ವಿರುದ್ಧ ಕುಮಾರಸ್ವಾಮಿಯವರು ಮಾಡಿರುವ ಆರೋಪಗಳಿಗೆ ರವಿವಾರ ಸರಣಿ​ ಟ್ವೀಟ್ ಗಳ​ ಮೂಲಕ ಸಚಿವರು ತಿರುಗೇಟು ನೀಡಿದ್ದಾರೆ.

''ಹತಾಶೆಯ ಕೂಪದಲ್ಲಿ ಬಿದ್ದು ವಿಲ ವಿಲ ಒದ್ದಾಡುತ್ತಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುವುದನ್ನೇ ಪೂರ್ಣಕಾಲಿಕ ಉದ್ಯೋಗ ಮಾಡಿಕೊಂಡಿದ್ದಾರೆ. ಆರೋಪ ಮಾಡಿದರೆ ಅದನ್ನು ಸಾಬೀತುಪಡಿಸಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹಾರಿಸುವುದ್ಯಾಕೆ?'' ಎಂದು ಸಚಿವರು ಪ್ರಶ್ನೆ ಮಾಡಿದ್ದಾರೆ. 

''HDKಯವರು ನಮ್ಮ ಸರ್ಕಾರದ ವಿರುದ್ಧ ಆರೋಪ ಮಾಡಲು ಒಮ್ಮೆ ಪೆನ್‌ಡ್ರೈವ್ ತೋರಿಸುತ್ತಾರೆ ಮತ್ತೊಮ್ಮೆ ಸಿಡಿ ತೋರಿಸುತ್ತಾರೆ. ನಿಜವಾಗಿಯೂ ಅವರ ಬಳಿ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ.ಕುಮಾರಸ್ವಾಮಿಯವರ ಕೈಯನ್ನು ನಾವ್ಯಾರು ಕಟ್ಟಿ ಹಾಕಿಲ್ಲ'' ಎಂದು ಹೇಳಿದ್ದಾರೆ. 

''HDKಯವರು ಪದೇ ಪದೇ ತೋಳ ಬಂತು ತೋಳದ ಕಥೆಯ ಕಥಾನಾಯಕನ ರೀತಿ ವರ್ತಿಸಿದರೆ ಹೆದರುವರು ಯಾರು?'' ಎಂದು ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News