ಸಹೋದರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ಕಲ್ಪಿಸಲು ಅವಕಾಶವಿಲ್ಲ: ಹೈಕೋರ್ಟ್

Update: 2023-09-14 14:49 GMT

ಬೆಂಗಳೂರು, ಸೆ.14: ಸರಕಾರಿ ನೌಕರ ಮೃತಪಟ್ಟಲ್ಲಿ ಅವರ ಸಹೋದರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ಕಲ್ಪಿಸಲು ಅವಕಾಶವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.

ಬೆಸ್ಕಾಂನಲ್ಲಿ ಲೈನ್‍ಮ್ಯಾನ್ ಆಗಿದ್ದ ವಿವಾಹಿತ ಸಹೋದರ ಮೃತಪಟ್ಟ ಹಿನ್ನೆಲೆಯಲ್ಲಿ ತನಗೆ ಅನುಕಂಪದ ಆಧಾರದಲ್ಲಿ ಉದ್ಯೋಗ ಒದಗಿಸಲು ಕೆಪಿಟಿಸಿಲ್ ಮತ್ತು ಬೆಸ್ಕಾಂಗೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು 2023ರ ಮಾರ್ಚ್ 30ರಂದು ಏಕಸದಸ್ಯ ಪೀಠ ವಜಾಗೊಳಿಸಿತ್ತು. ಈ ಆದೇಶ ಪ್ರಶ್ನಿಸಿ ತುಮಕೂರು ಜಿಲ್ಲೆ ಗೆದ್ಲಹಳ್ಳಿ ನಿವಾಸಿ ಜಿ.ಎಂ.ಪಲ್ಲವಿ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಿಭಾಗೀಯ ಪೀಠವು ವಜಾ ಮಾಡುವ ಮೂಲಕ ಏಕಸದಸ್ಯ ಪೀಠದ ಆದೇಶ ಎತ್ತಿ ಹಿಡಿದಿದೆ.

ಮೇಲ್ಮನವಿದಾರೆಯು ಮೃತ ನೌಕರ(ಸಹೋದರ) ಸಾವನ್ನಪ್ಪಿದ ವೇಳೆ ಅವರ ಆದಾಯದ ಮೇಲೆ ತಾನು ಅಲವಂಬಿಸಿದ್ದೆ ಎಂಬುದನ್ನು ದೃಢಪಡಿಸುವ ಸಾಕ್ಷವನ್ನು ಸಲ್ಲಿಸಿಲ್ಲ. ಹಾಗೆಯೇ, ಅನುಕಂಪದ ಉದ್ಯೋಗ ಪಡೆಯಲು ಸಮರ್ಥಿಸಿಕೊಳ್ಳವುದಕ್ಕಾಗಿ ಮೃತ ನೌಕರನ ಕುಟುಂಬವು ಆರ್ಥಿಕ ಮುಗ್ಗಟ್ಟಿಗೆ ತುತ್ತಾಗಿದೆ ಎಂಬುದನ್ನು ಸಾಬೀತುಪಡಿಸಲು ದಾಖಲೆಗಳು ಇಲ್ಲ. ಹೀಗಾಗಿ, ಮೇಲ್ಮನವಿದಾರೆಯನ್ನು ಅನುಕಂಪದ ಆಧಾರದಲ್ಲಿ ಉದ್ಯೋಗಕ್ಕೆ ಪರಿಗಣಿಸಲು ನಿರಾಕರಿಸಿದ ಏಕ ಸದಸ್ಯ ಪೀಠದ ಆದೇಶ ಸೂಕ್ತವಾಗಿದ್ದು, ಅದರಲ್ಲಿ ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದು ತಿಳಿಸಿದೆ. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News