ಮುನಿರತ್ನ ವಿರುದ್ಧ ಪ್ರಾಸಿಕ್ಯೂಷನ್‍ಗೆ ಅನುಮತಿ ಕೋರಿ ಸ್ಪೀಕರ್ಗೆ ಎಸ್ಐಟಿ ಮನವಿ
Update: 2024-12-25 15:13 GMT
ಬೆಂಗಳೂರು : ಬಿಬಿಎಂಪಿ ಗುತ್ತಿಗೆದಾರ ಚಲುವರಾಜುಗೆ ಲಂಚಕ್ಕೆ ಬೇಡಿಕೆ, ಬೆದರಿಕೆ ಹಾಕಿ ಹಣ ವಸೂಲಿ ಪ್ರಕರಣದಲ್ಲಿ ಮುನಿರತ್ನ ವಿರುದ್ಧ ಪ್ರಾಸಿಕ್ಯೂಷನ್‍ಗೆ ಅನುಮತಿ ಕೋರಿ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್‌ಗೆ ಎಸ್‍ಐಟಿ(ಸಿಟ್) ತಂಡ ಮನವಿ ಸಲ್ಲಿಸಿದೆ.
ಬಿಬಿಎಂಪಿ ಗುತ್ತಿಗೆದಾರ ಚಲುವರಾಜುಗೆ ಮುನಿರತ್ನ ಕಸ ವಿಲೇವಾರಿ ಗುತ್ತಿಗೆ ನೀಡಲು 30 ಲಕ್ಷ ರೂ. ಲಂಚಕ್ಕೆ ಬೇಡಿಕೆ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಮುನಿರತ್ನ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ತನಿಖೆ ನಡೆಸಬೇಕಿದೆ. ಹೀಗಾಗಿ ಸ್ಪೀಕರ್ ಯು.ಟಿ.ಖಾದರ್‌ಗೆ ಎಸ್‌ಐಟಿ ಅನುಮತಿ ಕೋರಿದೆ.