ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯಾ ರೆಡ್ಡಿ ನೇಮಕ

Update: 2024-08-13 17:13 GMT

ಬೆಂಗಳೂರು : ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳಿಗೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಕ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ. ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ಅವರನ್ನು ನೇಮಿಸಲಾಗಿದೆ.

 ಮಂಗಳವಾರ ಈ ಕುರಿತಂತೆ ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಆಂಧ್ರಪ್ರದೇಶದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಚುಕು ನಾಚಿ ಹಾಗೂ ಚಂಡೀಗಡದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ನಂದಿತಾ ಹೂಡ ಅವರನ್ನು ನೇಮಕ ಮಾಡಲಾಗಿರುವುದಾಗಿ ತಿಳಿಸಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News