ರಾಜ್ಯ ಬ್ಯಾರಿ ಅಭಿವೃದ್ಧಿ ನಿಗಮ ಸ್ಥಾಪನೆ: ಮುಖ್ಯಮಂತ್ರಿಗೆ ಸ್ಪೀಕರ್ ಯು.ಟಿ.ಖಾದರ್ ಪತ್ರ
Update: 2025-01-04 14:19 GMT
ಬೆಂಗಳೂರು : ಬೆಂಗಳೂರಿನ ಬ್ಯಾರಿ ವೆಲ್ಫೇರ್ ಅಸೋಸಿಯೇಷನ್ ಮಾಡಿರುವ ಮನವಿ ಹಿನ್ನೆಲೆಯಲ್ಲಿ 2025ನೆ ಸಾಲಿನ ರಾಜ್ಯ ಬಜೆಟ್‍ನಲ್ಲಿ ‘ಕರ್ನಾಟಕ ರಾಜ್ಯ ಬ್ಯಾರಿ ಅಭಿವೃದ್ಧಿ ನಿಗಮ’ ಸ್ಥಾಪಿಸುವ ಘೋಷಣೆಯನ್ನು ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಫರೀದ್ ಪತ್ರ ಬರೆದಿದ್ದಾರೆ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ವಾಸಿಸುವ ಸುಮಾರು 20 ಲಕ್ಷಕ್ಕೂ ಹೆಚ್ಚು ಕರ್ನಾಟಕದ ಮೂಲ ನಿವಾಸಿಗಳಾದ ಬ್ಯಾರಿ ಜನಾಂಗವು ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದಿದೆ. ಈ ಸಮುದಾಯವು ಅಭಿವೃದ್ಧಿ ಹೊಂದಲು ಅನುಕೂಲವಾಗುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅವರು ಕೋರಿದ್ದಾರೆ.