ಮೈಸೂರು ದಸರಾ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಕೆಎಸ್ಸಾರ್ಟಿಸಿಯಿಂದ ವಿಶೇಷ ಪ್ಯಾಕೇಜ್​; ಇಲ್ಲಿದೆ ಮಾಹಿತಿ

Update: 2023-10-14 08:11 GMT

ಬೆಂಗಳೂರು, ಅ.14: ರಾಜ್ಯದ ಹಾಗೂ ದೇಶದ ವಿವಿಧೆಡೆಗಳಿಂದ ಮೈಸೂರು ದಸರಾ ವೀಕ್ಷಣೆಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಕೆಎಸ್ಸಾರ್ಟಿಸಿ ನಿಗಮವು ಅ.20ರಿಂದ 26ರ ವರೆಗೆ ವಿಶೇಷ ಪ್ಯಾಕೇಜ್ ಸಾರಿಗೆ ಸೌಲಭ್ಯವನ್ನು ಒದಗಿಸಲು ಮುಂದಾಗಿದೆ.

ಮೈಸೂರಿಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಪ್ರಸಕ್ತ ಕಾರ್ಯಾಚರಣೆಯಲ್ಲಿರುವ ಕರ್ನಾಟಕ ಸಾರಿಗೆ, ರಾಜಹಂಸ, ಸ್ಲೀಪರ್, ಐರಾವತ, ಇ.ವಿ.ಪವರ್ ಪ್ಲಸ್, ಅಂಬಾರಿ ಉತ್ಸವ ಹಾಗೂ ಪಲ್ಲಕ್ಕಿ ಉತ್ಸವ ವಾಹನಗಳಿಂದ ಪ್ರವಾಸಿಗರಿಗೆ ಒಂದು ದಿನದ ವಿಶೇಷ ಪ್ರವಾಸ ಸಾರಿಗೆ ಸೇವೆಗಳನ್ನು ಕಲ್ಪಿಸಿರುವುದಾಗಿ ನಿಗಮ ಹೇಳಿದೆ.

ಕರ್ನಾಟಕ ಸಾರಿಗೆ ವಾಹನಗಳಿಂದ ಗಿರಿದರ್ಶಿನಿ-(ಬಂಡೀಪುರ, ಗೋಪಾಲಸ್ವಾಮಿ ಬೆಟ್ಟ, ಬಿಳಿಗಿರಿರಂಗನ ಬೆಟ್ಟ, ನಂಜನಗೂಡು ಮತ್ತು ಚಾಮುಂಡಿ ಬೆಟ್ಟ), ಜಲದರ್ಶಿನಿ-(ಗೋಲ್ಡನ್ ಟೆಂಪಲ್, ದುಬಾರೆ ಅರಣ್ಯ ನಿಸರ್ಗಧಾಮ, ರಾಜಾಸೀಟ್, ಹಾರಂಗಿ ಜಲಾಶಯ ಮತ್ತು ಕೆಆರ್ ಎಸ್), ದೇವದರ್ಶಿನಿ- (ನಂಜನಗೂಡು, ಬ್ಲಫ್, ಮುಡುಕುತೊರೆ, ತಲಕಾಡು, ಸೋಮನಾಥಪುರ, ಶ್ರೀರಂಗಪಟ್ಟಣ) ಎಂಬ ವಿಶೇಷ ಪ್ರವಾಸ ಸಾರಿಗೆಗಳ ಕಾರ್ಯಾಚರಣೆ ನಡೆಸಲಿದೆ.

ರಾಜಹಂಸ ವಾಹನಗಳಿಂದ ಗಿರಿದರ್ಶಿನಿ ಹಾಗೂ ದೇವದರ್ಶಿನಿ ಪ್ರವಾಸ, ಸಿಟಿ ವೋಲ್ವೋ ಸಾರಿಗೆಗಳಿಂದ ದೇವದರ್ಶಿನಿ ಹಾಗೂ ಮೈಸೂರು ನಗರ ದೀಪಾಲಂಕಾರ ದರ್ಶನ, ಐರಾವತ ಕ್ಲಬ್ ಕ್ಲಾಸ್ ವಾಹನಗಳಿಂದ ಮಡಿಕೇರಿ ಪ್ಯಾಕೇಜ್ ಪ್ರವಾಸ ಒದಗಿಸಲಾಗಿದೆ ಎಂದು ನಿಗಮ ತಿಳಿಸಿದೆ.

ಈ ವಿಶೇಷ ಪ್ಯಾಕೇಜ್‍ಗಳನ್ನು ಅ.20ರಿಂದ 26ರ ಅವಧಿಯಲ್ಲಿ ಮಾತ್ರ ಒದಗಿಸಲಾಗಿದೆ. ಇ-ಟಿಕೆಟ್ ಬುಕ್ಕಿಂಗ್ ಅನ್ನು ಕೆಎಸ್ಸಾರ್ಟಿಸಿ ವೆಬ್‍ಸೈಟ್ ಮುಖಾಂತರ ಬುಕ್ಕಿಂಗ್ ಮಾಡುವುದು ಹಾಗೂ ನಿಗಮದ ಬುಕ್ಕಿಂಗ್ ಕೌಂಟರ್‍ಗಳ ಮೂಲಕವೂ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ ಎಂದು ನಿಗಮ ಪ್ರಕಟನೆಯಲ್ಲಿ ತಿಳಿಸಿದೆ.


Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News