ಎಸ್.ಆರ್. ಪಾಟೀಲ್, ಶ್ರೀಕಂಠೇಗೌಡಗೆ ವಿಧಾನ ಪರಿಷತ್ತಿನ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ

Update: 2023-07-18 16:51 GMT

ಬೆಂಗಳೂರು, ಜು.18:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಕರ್ನಾಟಕ ವಿಧಾನ ಪರಿಷತ್ತಿನ 2021 ಮತ್ತು 22ನೇ ಸಾಲಿನ ಅತ್ಯುತ್ತಮ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ವಿರೋಧ ಪಕ್ಷದ ನಾಯಕರಾದ ಎಸ್.ಆರ್.ಪಾಟೀಲ್ ಹಾಗೂ 2022-23ನೆ ಸಾಲಿಗೆ ಅತ್ಯುತ್ತಮ ಶಾಸಕರಾಗಿ ಆಯ್ಕೆಯಾಗಿರುವ ಪರಿಷತ್ ಮಾಜಿ ಸದಸ್ಯ ಶ್ರೀಕಂಠೇಗೌಡರಿಗೆ ಪ್ರಶಸ್ತಿ ನೀಡಿ, ಗೌರವಿಸಿದರು. 

ಬಳಿಕ ಮಾತನಾಡಿದ ಅವರು, ಸಂಸತ್ತು, ವಿಧಾನಸಭೆಯನ್ನು ದೇವರು ಎಂದು ಕರೆಯುತ್ತೇವೆ. ಎಲ್ಲರಿಗೂ ಒಳಿತು ಮಾಡು ಎಂದು ಕೇಳಿಕೊಂಡರೆ ಒಳಿತಾಗುತ್ತದೆ. ನಾವು ಇಲ್ಲಿಗೆ ಬರುವುದು ದೇಗುಲಕ್ಕೆ ಬಂದಂತೆ. ನಾವು ಜನಸೇವಕರು ಎಂದರು.

ಪ್ರತಿಯೊಬ್ಬರೂ ಜನರ ಧ್ವನಿಯಾದಾಗ ಮಾತ್ರ ಸರಕಾರ ಪರಿಣಾಮಕಾರಿಯಾಗಿ ಕೆಲಸ ಮಾಡಬಹುದು. ಶಾಸಕರಾದವರಿಗೆ ಅಧ್ಯಯನ ಬಹಳ ಮುಖ್ಯವಾಗಿದ್ದು, ಸಮಾಜಕ್ಕೆ ಸಂಬಂಧಿಸಿದಂತೆ ಮಾತನಾಡಬೇಕು. ಜನರ ಸಮಸ್ಯೆಗಳು, ಜನರ ಧ್ವನಿಯಾಗಿ ಮಾತನಾಡುವುದು ಮುಖ್ಯ. ಸದನದ ಇತರರಿಗೆ ಅವರ ಭಾಷಣ, ವಿಚಾರಗಳು ಮಾದರಿಯಾಗಿವೆ ಎಂದರು.

ಸಭಾಪತಿ ಬಸವರಾಜ ಹೊರಟ್ಟಿ, ಉಪಸಭಾಪತಿ ಎಂ.ಕೆ.ಪ್ರಾಣೇಶ್, ಸಚಿವರಾದ ಎಚ್.ಕೆ.ಪಾಟೀಲ್ ಹಾಗೂ ಎನ್.ಎಸ್.ಬೋಸರಾಜು, ಪರಿಷತ್ ಸದಸ್ಯ ಭೋಜೇಗೌಡ, ಟಿ.ಎ.ಶರವಣ, ಸರಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್, ವೈ.ಎ.ನಾರಾಯಣಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

 

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News