ಎಸ್.ಟಿ.ಸೋಮಶೇಖರ್, ಹೆಬ್ಬಾರ್ ವಿರುದ್ಧ ಕ್ರಮಕ್ಕೆ ಕೇಂದ್ರ ಶಿಸ್ತು ಸಮಿತಿಗೆ ವರದಿ : ಲಿಂಗರಾಜ ಪಾಟೀಲ್

Update: 2025-03-14 18:32 IST
ಎಸ್.ಟಿ.ಸೋಮಶೇಖರ್, ಹೆಬ್ಬಾರ್ ವಿರುದ್ಧ ಕ್ರಮಕ್ಕೆ ಕೇಂದ್ರ ಶಿಸ್ತು ಸಮಿತಿಗೆ ವರದಿ : ಲಿಂಗರಾಜ ಪಾಟೀಲ್

 ಶಿವರಾಮ ಹೆಬ್ಬಾರ್/ಎಸ್.ಟಿ.ಸೋಮಶೇಖರ್ 

  • whatsapp icon

ಹುಬ್ಬಳ್ಳಿ : ಪಕ್ಷ ವಿರೋಧಿ ಚಟುವಟಿಕೆ ಆರೋಪದಲ್ಲಿ ಇಬ್ಬರು ಶಾಸಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳವಂತೆ ಕೇಂದ್ರ ಶಿಸ್ತು ಸಮಿತಿಗೆ ವರದಿ ಸಲ್ಲಿಸಲಾಗಿದೆ ಎಂದು ಬಿಜೆಪಿ ಶಿಸ್ತು ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಲಿಂಗರಾಜ ಪಾಟೀಲ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯ ನಂತರ ಶಾಸಕರಾದ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರು ಪಕ್ಷಕ್ಕೆ ನಿರಂತರವಾಗಿ ದ್ರೋಹ ಮಾಡಿದ್ದಾರೆ. ಕಳೆದ ಲೋಕಸಭಾ ಮತ್ತು ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ. ಇವರಿಬ್ಬರ ಬಗ್ಗೆ ಈಗಾಗಲೇ ಕೇಂದ್ರ ಶಿಸ್ತು ಸಮಿತಿ ಅಧ್ಯಕ್ಷ ಓಂ ಪಾಟೀಲ್ ಅವರಿಗೆ ವರದಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್‌ ಅವರ ಕ್ಷೇತ್ರಕ್ಕೆ ತೆರಳಿ ಪಕ್ಷದ ಕಾರ್ಯಕರ್ತರು, ಅಲ್ಲಿನ ಮಂಡಳ ಅಧ್ಯಕ್ಷರು ಮತ್ತು ಜಿಲ್ಲಾಧ್ಯಕ್ಷರಿಂದ ವರದಿ ಸಿದ್ಧಪಡಿಸಿ ನೀಡಿದ್ದೇನೆ. ಅಲ್ಲದೇ ಇಬ್ಬರು ಶಾಸಕರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ವೀಡಿಯೊ ಮತ್ತು ಪೇಪರ್ ಕಟ್ಟಿಂಗ್‌ಗಳನ್ನು ವರದಿಯ ಜೊತೆಗೆ ಸಲ್ಲಿಸಲಾಗಿದೆ. ಇಲ್ಲಿಯವರೆಗೂ 2-3 ಬಾರಿ ಕೇಂದ್ರಕ್ಕೆ ವರದಿ ನೀಡಲಾಗಿದೆ. ಈ ತಿಂಗಳಾಂತ್ಯಕ್ಕೆ ಇಬ್ಬರ ಶಾಸಕರ ವರದಿಗೆ ಉತ್ತರ ಬರಲಿದೆ ಎಂದು ಲಿಂಗರಾಜ್ ಪಾಟೀಲ್‌ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News