ರಾಜ್ಯ ಬಜೆಟ್ 2023-24: ಯಾರು ಏನು ಹೇಳಿದರು?

Update: 2023-07-07 17:18 GMT

‘ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‍ನಲ್ಲಿ ಬಯಲುಸೀಮೆ ಜಿಲ್ಲೆಗಳ ಬಗ್ಗೆ ತೀವ್ರ ನಿರ್ಲಕ್ಷ್ಯ ತೋರಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ರೇಶ್ಮೆ ಹಾಗೂ ಹೂವು ಬೆಳೆಗಾರರ ಅಭ್ಯುದಯಕ್ಕೆ ಯಾವುದೇ ಭರವಸೆ ಸಿಕ್ಕಿಲ್ಲ. ಕೆಸಿ ವ್ಯಾಲಿ, ಎಚ್‍ಎನ್ ವ್ಯಾಲಿ ಯೋಜನೆಯಡಿ ತೃತೀಯ ಹಂತದ ಶುದ್ಧೀಕರಣ ಕೈಗೊಳಲು ಬಜೆಟ್‍ನಲ್ಲಿ ಹಣ ಮೀಸಲಿಟ್ಟಿಲ್ಲ. ಕಾಂಗ್ರೆಸ್ ಎಲ್ಲವನ್ನೂ ಇದು ರಿವರ್ಸ್ ಮಾಡುವ ಸರಕಾರವಾಗಿದ್ದು, ಅಭಿವೃದ್ಧಿಯೂ ರಿವರ್ಸ್ ಗೇರ್‍ನಲ್ಲಿದೆ’

-ಡಾ.ಕೆ.ಸುಧಾಕರ್, ಮಾಜಿ ಸಚಿವ

................

‘ಸಿದ್ದರಾಮಯ್ಯ ಮಂಡಿಸಿದ ಬಜೆಟ್‍ನಲ್ಲಿ ಶಿಕ್ಷಣ, ಆರೋಗ್ಯ, ಕೃಷಿ ಕ್ಷೇತ್ರಗಳಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕಾಣಬಹುದು. ಆದರೆ, ಬಜೆಟ್‍ನಲ್ಲಿ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಹಿಂಪಡೆಯುವ ಪ್ರಸ್ತಾಪವಿಲ್ಲ. ಕಾರ್ಮಿಕರ ಶೋಷಣೆಗೆ ಅನುಕೂಲವಾಗುವ ಫ್ಯಾಕ್ಟರಿ ಕಾಯ್ದೆ ತಿದ್ದುಪಡಿ ಹಿಂಪಡೆಯುವ ಬಗ್ಗೆಯೂ ಪ್ರಸ್ತಾಪ ಮಾಡದೆ ಈ ಸರಕಾರವು ಕಾರ್ಮಿಕ ವಿರೋಧಿಯಾಗಿ ವರ್ತಿಸಿದೆ. ಪಠ್ಯಪುಸ್ತಕ ಮರುಪರಿಷ್ಕರಣೆ, ಶಿಕ್ಷಣ ಕ್ಷೇತ್ರ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಘೋಷಿಸಿರುವ ಕಾರ್ಯಕ್ರಮಗಳನ್ನು, ದುರ್ಬಲ ವರ್ಗಗಳಿಗೆ ಘೋಷಿಸಿರುವ ಕಾರ್ಯಕ್ರಮಗಳನ್ನು ಸಿಪಿಐ ರಾಜ್ಯ ಮಂಡಳಿ ಸ್ವಾಗತಿಸುತ್ತದೆ’.

-ಸಾತಿ ಸುಂದರೇಶ್, ರಾಜ್ಯ ಕಾರ್ಯದರ್ಶಿ, ಸಿಪಿಐ

................

‘ಪ್ರಸಕ್ತ ಮುಂಗಡ ಪತ್ರವು ಒಟ್ಟು 3,27,747 ಕೋಟಿ ರೂ.ಗಳಾಗಿದ್ದು, ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ 8,884 ಕೋಟಿ ರೂ.ಮೀಸಲಿಟ್ಟಿರುವುದು ಸ್ವಾಗತಾರ್ಹ. ಕೃಷಿ ಉತ್ಪಾಧನೆ, ಉತ್ಪಾದಕತೆ ಹೆಚ್ಚಿಸುವಲ್ಲಿ ನೆರವಾಗಲಿದ್ದು, ಕೃಷಿಕರ ಆದಾಯ ವೃದ್ಧಿಗೆ ಪೂರಕ. ರೈತರ ಸಾಲದ ಮಿತಿಯನ್ನು ಹೆಚ್ಚಿಸಿರುವುದರಿಂದ ಕೃಷಿಯಲ್ಲಿ ಬೆಳೆ ವೈವಿಧ್ಯತೆ, ನೂತನ ತಂತ್ರಜ್ಞಾನಗಳ ಅಳವಡಿಕೆಗೂ ನೆರವಾಗಲಿದೆ.

-ಎಸ್.ವಿ.ಸುರೇಶ, ಬೆಂಗಳೂರಿನ ಕೃಷಿ ವಿವಿಯ ಕುಲಪತಿ

..................

‘ಹೊಸ ಶಿಕ್ಷಣ ನೀತಿಯನ್ನು ಕೈಬಿಟ್ಟು ರಾಜ್ಯಕ್ಕೆ ಪ್ರತ್ಯೇಕ ನೀತಿಯೊಂದನ್ನು ಜಾರಿಗೊಳಿಸುವುದಾಗಿ ಪ್ರಸಕ್ತ ಆಯವ್ಯಯದಲ್ಲಿ ಘೋಷಿಸಿರುವ ಸರಕಾರದ ನಿರ್ಧಾರ ಸ್ವಾಗತಾರ್ಹ. ಪಠ್ಯಪುಸ್ತಕ ಪರಿಷ್ಕರಣೆಗೆ ತಜ್ಞರ ಸಮಿತಿ ನೇಮಕ ಮಾಡಿ ತಿಳಿಸಿದೆ. ಇದು ರಾಜ್ಯದಲ್ಲಿ ಬೆಳೆದ ವಿದ್ಯಾರ್ಥಿ ಹಾಗೂ ಜನ ಚಳುವಳಿಗೆ ಸಂದ ಜಯ’

-ಅಜಯ್ ಕಾಮತ್, ಎಐಡಿಎಸ್‍ಒ ರಾಜ್ಯ ಕಾರ್ಯದರ್ಶಿ

..................

‘ಎಸ್ಸಿಪಿ-ಟಿಎಸ್ಪಿ ಕಾಯ್ದೆಯಲ್ಲಿ 7(ಡಿ) ಕಲಂ ರದ್ದಮಾಡಿ, ದಲಿತರ ಹಣವನ್ನು ದಲಿತರ ಅಭಿವೃದ್ಧಿಗಾಗಿಯೇ ಬಳಸಬೇಕು ಎಂಬುದು ದಲಿತ ಸಂಘಟನೆಗಳ ಹಲವು ವರ್ಷಗಳ ಬೇಡಿಕೆಯಾಗಿತ್ತು. ಸರಕಾರದಲ್ಲಿನ ಕೆಲ ಪಟ್ಟಭದ್ರ ಹಿತಾಸಕ್ತಿಗಳಿಂದ ಈವರೆಗೆ ಈ ಕಲಂ ರದ್ಧಾಗಿರಲಿಲ್ಲ. 7(ಡಿ) ಕಲಂ ರದ್ದುಪಡಿಸುವ ನಿರ್ಧಾರ ತೆಗೆದುಕೊಂಡಿರುವುದು ಸ್ವಾಗತಾರ್ಹ’

-ಮಾವಳ್ಳಿ ಶಂಕರ್, ದಸಂಸ(ಅಂಬೇಡ್ಕರ್ ವಾದ) ಪ್ರಧಾನ ಸಂಚಾಲಕ

......................

‘ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕದ ಕ್ರೈಸ್ತ ಅಭಿವೃದ್ಧಿ ನಿಗಮವನ್ನು ಘೋಷಿಸಿದ್ದು, ಸಮುದಾಯದ ಅನೇಕ ಮುಖಂಡರು, ನಾಯಕರುಗಳು, ಹೋರಾಟ ಮಾಡಿದ ಆ ಪ್ರಯತ್ನಕ್ಕೆ ಸಂದ ಜಯ’

-ಪ್ರಜ್ವಲ್ ಸ್ವಾಮಿ, ಅಖಿಲ ಭಾರತ ಕ್ರೈಸ್ತ ಮಹಾಸಭಾ ಸಂಸ್ಥಾಪಕ ಅಧ್ಯಕ್ಷ

....................

‘ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಡಿಸಿರುವ ಬಜೆಟ್ ಎಂದಿನ ರೀತಿಯಲ್ಲಿ ಸಾಮಾನ್ಯವಾಗಿದ್ದು, ಕೇವಲ ಅವರ ಗ್ಯಾರಂಟಿ ಯೋಜನೆಗಳಿಗಾಗಿ ಮಂಡಿಸಿದ ಯೋಜನೆಯಾಗಿದೆ ಮತ್ತು ಗ್ಯಾರಂಟಿಗಳ ಸುತ್ತ ಗಿರಕಿ ಹೊಡೆದಿದೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಕೈಗೊಳ್ಳಬೇಕಾದ ಇತರೆ ಯೋಜನೆಗಳು ಮತ್ತು ಕಾರ್ಯಕ್ರಮಗಳ ಜಾರಿಗೆ ಸಂಪನ್ಮೂಲದ ಕೊರತೆ ಎದ್ದು ಕಾಣುತ್ತಿದೆ’

-ದೀಪಕ್ ಸಿ.ಎನ್., ಕೆಆರ್‍ಎಸ್ ಪಕ್ಷದ ಪ್ರಧಾನ ಕಾರ್ಯದರ್ಶಿ

.................

‘ರಾಜ್ಯದ ಕಬ್ಬು ಬೆಳೆಗಾರರಿಗೆ ಹೈಕೋರ್ಟ್‍ನ ತಡೆಯಾಜ್ಞೆ ತೆರುವುಗೊಳಿಸಿ ರೈತರಿಗೆ ಹಣ ಕೊಡಿಸಬೇಕು. ಅನ್ನ ಭಾಗ್ಯ ಯೋಜನೆಗೆ 10 ಸಾವಿರ ಕೋಟಿ ರೂ. ಮೀಸಲಿಟ್ಟ ಹಣದಿಂದ ರಾಜ್ಯದ ರೈತರಿಂದಲೇ ಆಕ್ಕಿ ರಾಗಿ ಜೋಳ ಖರೀದಿ ಮಾಡಬೇಕು. ಮೇಕೆದಾಟು ಯೋಜನೆ, ಕಳಸ ಬಂಡೂರಿ ಯೋಜನೆ ಕೇವಲ ಘೋಷಣೆ ಬದಲಾಗಿ ಕಾಮಗಾರಿ ತುರ್ತಾಗಿ ಕೈಗೆತ್ತಿಕೊಳ್ಳಬೇಕು ಎಂಬುದು ನಮ್ಮ ಒತ್ತಾಯವಿದ್ದು, ಈ ಬಗ್ಗೆ ಬಜೆಟ್‍ನಲ್ಲಿ ಸ್ಪಷ್ಟ ಪ್ರತಿಕ್ರಿಯೆ ಇಲ್ಲ’

-ಕುರುಬುರ್ ಶಾಂತಕುಮಾರ್, ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ

..............

‘ಸರಕಾರಿ ಶಾಲೆಗಳ ಸಬಲೀಕರಣಕ್ಕೆ ಇಷ್ಟೊಂದು ಪ್ರಮಾಣದ ಹಣವನ್ನು ಈ ಹಿಂದೆ ಯಾವ ಸರಕಾರವು ಮೀಸಲಿಟ್ಟಿರಲಿಲ್ಲ. ಪ್ರಸಕ್ತ ಬಜೆಟ್‍ನಲ್ಲಿ ಸರಕಾರಿ ಶಾಲೆಗಳ ಸಬಲೀಕರಣಕ್ಕೆ 153 ಕೋಟಿ ರೂ.ಗಳನ್ನು ಮೀಸಲಿಟ್ಟಿರುವುದು ಸ್ವಾಗತಾರ್ಹ’

-ಚಂದ್ರಶೇಖರ ನುಗ್ಗಲಿ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಪ್ರಧಾನ ಕಾರ್ಯದರ್ಶಿ

.......................................

‘ಪ್ರಸ್ತುತ ಸಾಲಿನ ಬಜೆಟ್‍ನಲ್ಲಿ ರಾಜ್ಯ ಸರಕಾರವು ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಗೆ 2101 ಕೋಟಿ ರೂ.ಅನುದಾನವನ್ನು ಒದಗಿಸುವುದನ್ನು ಸ್ವಾಗತಿಸುತ್ತೇನೆ. ಆದರೆ, ಈ ಹಿಂದಿನ ಬಿಜೆಪಿ ಸರಕಾರವು ಅಲ್ಪಸಂಖ್ಯಾತರಿಗೆ ಕಡಿಮೆ ಅನುದಾನವನ್ನು ಒದಗಿಸಿ, ಅನ್ಯಾಯ ಎಸಗಿತ್ತು ಎಂದು ಹೈಕೋರ್ಟ್ ವಕೀಲ ರಹಮತ್ ಉಲ್ಲಾ ಕೊತ್ವಾಲ್ ಹೇಳಿದ್ದಾರೆ.

....................

‘ಪ್ರಸ್ತುತ ಸಾಲಿನ ಬಜೆಟ್‍ನಲ್ಲಿ ವಕೀಲರಿಗೆ ಸಂಬಂಧಿಸಿದಂತೆ ಯಾವುದೇ ಯೋಜನೆಗಳನ್ನು ಜಾರಿಗೆ ತಂದಿಲ್ಲ. ಜತೆಗೆ ವಕೀಲರಿಗೆ ಆರೋಗ್ಯ ವಿಮೆ ಯೋಜನೆಯನ್ನು ಜಾರಿಗೊಳಿಸಿಲ್ಲ. ಸರಕಾರಿ ಶಿಕ್ಷಕರಿಗೆ ಹಳೇ ಪಿಂಚಣಿ(ಒಪಿಎಸ್) ಯೋಜನೆಯನ್ನು ಈ ಬಜೆಟ್‍ನಲ್ಲಿ ಮರು ಜಾರಿಗೆ ಘೋಷಣೆ ಮಾಡಬೇಕಿತ್ತು. ಆದರೆ, ಜಾರಿ ಮಾಡದೇ ಶಿಕ್ಷಕರಿಗೆ ಅನ್ಯಾಯ ಎಸಗಿದ್ದಾರೆ’ ಎಂದು ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ, ಜೆಡಿಎಸ್ ಮುಖಂಡ ಎ.ಪಿ.ರಂಗನಾಥ್ ತಿಳಿಸಿದ್ದಾರೆ.

ಬೆಂಗಳೂರು, ಜು.7: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು (ಶುಕ್ರವಾಶ ಒಟ್ಟು 3.27 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡನೆ ಮಾಡಿದ್ದಾರೆ. ಈ ಬಗ್ಗೆ ರಾಜಕೀಯ, ರೈತ ಮುಖಂಡರು ಏನು ಹೇಳಿದರು? ಎನ್ನುವುದು ಇಲ್ಲಿದೆ... 

ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ಹಾಕಲಿಲ್ಲ, ಬೆಲೆ ಏರಿಕೆ ಮಾಡಿಲ್ಲ: ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳಿಗೆ 13,500 ಕೋಟಿ ರೂ. ರಾಜಸ್ವ ಸಂಗ್ರಹ ಗುರಿ ಹೆಚ್ಚಳ ಹಾಗೂ 8ಸಾವಿರ ಕೋಟಿ ರೂ. ಹೆಚ್ಚುವರಿ ಸಾಲದ ಮೂಲಕ ಮತ್ತು ಉಳಿದ ಸಂಪನ್ಮೂಲಕ್ಕೆ ಯೋಜನೆಗಳ ಆದ್ಯತೆಯನ್ನು ನಿಗದಿಪಡಿಸುವ ಮೂಲಕ ಹೊಂದಾಣಿಕೆ ಮಾಡಿಕೊಳ್ಳಲಾಗಿದೆ. ಈ ಯೋಜನೆಗಳ ಅನುಷ್ಠಾನಕ್ಕಾಗಿ ಬಡವರ-ಮಧ್ಯಮ ವರ್ಗದವರ ಮೇಲೆ ಯಾವುದೇ ತೆರಿಗೆ ಹಾಕಿಲ್ಲ, ಜನರಿಗೆ ಹೊರೆ ಆಗಬಾರದು ಎನ್ನುವ ಕಾರಣಕ್ಕೇ ಪೆಟ್ರೋಲ್ ಡೀಸೆಲ್ ಮೇಲೆ ತೆರಿಗೆ ಹಾಕಲಿಲ್ಲ, ಬೆಲೆ ಏರಿಕೆ ಮಾಡಿಲ್ಲ. ಇನ್ನೂ, ಗ್ಯಾರಂಟಿ ಯೋಜನೆಗಳಿಗೆ ಪ್ರಸಕ್ತ ಸಾಲಿಗೆ 35,410ಕೋಟಿ ರೂ.ಅಗತ್ಯವಿದ್ದು, ಜನಸಾಮಾನ್ಯರಿಗೆ ಹೊರೆಯಾಗದಂತೆ ಸಂಪನ್ಮೂಲ ಕ್ರೋಢೀಕರಣ ಮಾಡಲಾಗುವುದು’

-ಸಿದ್ದರಾಮಯ್ಯ, ಮುಖ್ಯಮಂತ್ರಿ

------------------------------------------

ಇದೊಂದು ತೆರಿಗೆ ಹೊರೆ ಬಜೆಟ್: ‘ಇದೊಂದು ತೆರಿಗೆ ಹೊರೆ ಬಜೆಟ್ ಆಗಿದೆ. ಅದರಲ್ಲೂ ಪ್ರಥಮ ಸಂಪುಟದಲ್ಲಿಯೇ ಎಲ್ಲ ಗ್ಯಾರೆಂಟಿಗಳನ್ನು ಜಾರಿಗೊಳಿಸುತ್ತೇವೆ ಎಂದಿದ್ದ ಕಾಂಗ್ರೆಸ್, ಇಂದು ಈ ಬಜೆಟ್‍ನಲ್ಲಿ ಈ ಯೋಜನೆಗಳನ್ನು ಜಾರಿಗೆ ತರಲು ಇಡೀ ಆರ್ಥಿಕ ವರ್ಷ ಬೇಕಾಗಬಹುದು ಎಂದು ಅಧಿಕೃತವಾಗಿ ಹೇಳಿದಂತಾಗಿದೆ. ಅವುಗಳ ಜಾರಿಗೆ ಅಗತ್ಯ ಇರುವ ಸುಮಾರು 52ಸಾವಿರ ಕೋಟಿ ರೂ. ಗಳನ್ನು ಹೇಗೆ ಹೊಂದಿಸಲಾಗುವುದು ಎಂಬ ಸ್ಪಷ್ಟ ಚಿತ್ರಣವನ್ನು ಅವರು ನೀಡಿಲ್ಲ’

-ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ

------------------------------------------

‘ಬಜೆಟ್‍ನಲ್ಲಿ ಭವಿಷ್ಯದ ಯೋಜನೆಗಳ ಕುರಿತು ಹೇಳುವ ಬದಲು, ಹಿಂದಿನ ಸರಕಾರ ಹಾಗೂ ಕೇಂದ್ರ ಸರಕಾರವನ್ನು ದ್ವೇಷಿಸುವ ರಾಜಕೀಯ ಪ್ರೇರಿತ, ರಿವರ್ಸ್ ಗೇರ್ ಬಜೆಟ್ ಇದಾಗಿದೆ. ಇವತ್ತಿನ ಹಣಕಾಸಿನ ಸ್ಥಿತಿ, ಇವತ್ತಿನ ವಾಸ್ತವ ಸ್ಥಿತಿ ಬಗ್ಗೆ ಮಾತನಾಡುವ ಬದಲು ಹಳೆಯ ಕಾರ್ಯಕ್ರಮಗಳ ಬಗ್ಗೆ ಹೇಳಿದ್ದಾರೆ. ಇದು ರಾಜಕೀಯ ಬಜೆಟ್. ಪ್ರತಿಯೊಂದಕ್ಕೂ 2013 ಕ್ಕೆ ಹೋಲಿಕೆ ಮಾಡಿದ್ದಾರೆ. ಅದನ್ನು ನೋಡಿದರೆ ಅವರು ಹೆಚ್ಚು ಸಾಲ ಮಾಡಿದ್ದಾರೆ. ಇದೊಂದು ರಿವರ್ಸ್ ಗೇರ್ ಇರುವ ಸರಕಾರ’

-ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ

------------------------------------------

‘ರಾಜ್ಯದಲ್ಲಿ ಉದ್ಯೋಗ ಸೃಷ್ಟಿಯ ಕುರಿತು ಯಾವುದೇ ಕ್ರಮ ಕೈಗೊಳ್ಳದಿರುವುದು. ರಾಜ್ಯದ ಯುವಜನರಿಗೆ ತೀವ್ರ ನಿರಾಶೆಯನ್ನುಂಟು ಮಾಡಿದೆ. ದುಡಿಯಲು ತುದಿಗಾಲಲ್ಲಿ ನಿಂತಿರುವ ಯುವಜನತೆಗೆ ಉದ್ಯೋಗ ಖಾತ್ರಿಪಡಿಸದ ಈ ಬಜೆಟ್ ಖಂಡನೀಯ’

-ಬಸವರಾಜ ಪೂಜಾರ, ಕಾರ್ಯದರ್ಶಿ, ಡಿವೈಎಫ್‍ಐ

------------------------------------------

‘ಹಣಕಾಸು ಸಚಿವರೂ ಆದ ಸಿದ್ದರಾಮಯ್ಯ ಅವರಿಂದು ಮಂಡಿಸಿರುವ 2023-24ನೆ ಸಾಲಿನ ಆಯವ್ಯಯ ಬಡವರು, ಮಧ್ಯಮ ವರ್ಗದ ಜನರ ಅವಶ್ಯಕತೆಗೆ ಪೂರಕವಾದ ಹಾಗೂ ಎಲ್ಲ ಕ್ಷೇತ್ರಗಳ ಬೆಳವಣಿಗೆಗೆ ಪೂರಕವಾದ ಸರ್ವಸ್ಪರ್ಶಿ ಬಜೆಟ್ ಆಗಿದೆ’

-ಈಶ್ವರ ಖಂಡ್ರೆ, ಅರಣ್ಯ ಸಚಿವ

------------------------------------------

‘ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಮುಂಗಡ ಪತ್ರ ಅರ್ಥವ್ಯವಸ್ಥೆಯನ್ನು ಅಭಿವೃದ್ದಿ ಪಥದಲ್ಲಿ ಕೊಂಡೊಯ್ಯುವ ರಾಜ್ಯದ ಎಲ್ಲ ವರ್ಗಗಳ ಸೇರ್ಪಡೆ ಮಾಡುವ ಜನಪರ ಬಜೆಟ್. ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಗ್ಯಾರಂಟಿಗಳನ್ನು ಮುಂಗಡಪತ್ರದಲ್ಲಿ ಪ್ರಕಟಿಸಿ, ಕಾಂಗ್ರೆಸ್ ಪಕ್ಷದ ಬದ್ದತೆಯನ್ನು ಸ್ಷಷ್ಟವಾಗಿ ವ್ಯಕ್ತಪಡಿಸಲಾಗಿದೆ’

-ಎಚ್.ಕೆ.ಪಾಟೀಲ್, ಕಾನೂನು ಸಚಿವ

------------------------------------------

‘ಮುಖ್ಯಮಂತ್ರಿ ಸಿದ್ದರಾಮಯ್ಯನವರ 14ನೆ ಬಜೆಟ್ ಅನ್ನೋದು ಬಿಟ್ಟರೆ ಬೇರೆ ಯಾವ ವಿಶೇಷತೆಯು ಕಾಣುತ್ತಿಲ್ಲ. ಗ್ಯಾರಂಟಿಗಳನ್ನು ಸಂಪೂರ್ಣವಾಗಿ ಜಾರಿ ಮಾಡುತ್ತಾರೆಂದು ನಿರೀಕ್ಷಿಸುತ್ತಿದ್ದ ಜನರಿಗೆ ನಿರಾಸೆಯಾಗಿದೆ. ಅಲ್ಲದೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೂ ನಿರಾಸೆ ತಂದ ಬಜೆಟ್ ಇದಾಗಿದೆ. ಮೇಕೆದಾಟು ಯೋಜನೆಗೆ 9 ಸಾವಿರ ಕೋಟಿ ರೂ., ಮಹದಾಯಿ ಯೋಜನೆಗೆ 3 ಸಾವಿರ ಕೋಟಿ ರೂ.ಇಡುತ್ತೇವೆ ಎಂದು ಮಾತುಕೊಟ್ಟು, ಅನುದಾನವೆ ಒದಗಿಸಿಲ್ಲ’

-ಬಿ.ವೈ.ವಿಜಯೇಂದ್ರ, ಬಿಜೆಪಿ ಶಾಸಕ

------------------------------------------

‘ಕೇಂದ್ರದ ಮೋದಿ ಅವರ ಸರಕಾರ, ಹಿಂದಿನ ಬಿಜೆಪಿ ಸರಕಾರವನ್ನು ನಿಂದಿಸಲು ಮೀಸಲಾದ, ರಾಜಕೀಯ ಹೇಳಿಕೆಗಳಿಗೆ ಸೀಮಿತವಾದ ಹಾಗೂ ಅನೇಕ ಯೋಜನೆಗಳನ್ನು ಎಟಿಎಂಗಳನ್ನು ತುಂಬಿಸಿಕೊಳ್ಳಲು ಮಾಡಲಾದ ಬಜೆಟ್. ನೀರಾವರಿ, ಕೃಷಿಗೆ, ಜನರ ಬದುಕು ಕಟ್ಟಲು, ಜನರು ಸ್ವಾಭಿಮಾನಿಗಳಾಗಿ, ಸ್ವಾವಲಂಬಿಗಳಾಗಿ ಜೀವನ ಮಾಡಲು ಈ ಬಜೆಟ್ ಕೊಟ್ಟ ದೂರದೃಷ್ಟಿ ಏನು?’

-ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ

------------------------------------------

‘ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಧ್ಯೇಯವಾಕ್ಯದೊಂದಿಗೆ ರಾಜ್ಯದ ಜನರನ್ನು ಹಿತದೃಷ್ಟಿಯಲ್ಲಿಟ್ಟುಕೊಂಡು 3.27ಲಕ್ಷ ಕೋಟಿ ರೂ.ಮೊತ್ತದ ಬಜೆಟ್ ಮಂಡನೆ ಮಾಡಲಾಗಿದೆ. ಆ ಮೂಲಕ ರಾಜ್ಯದ ಎಲ್ಲ ವರ್ಗದ ಜನರ ಸವಾರ್ಂಗೀಣ ಏಳಿಗೆಗೆ ಪೂರಕವಾದ ಬಜೆಟ್ ಇದಾಗಿದೆ. ವಿದೇಶಿ ಬಂಡವಾಳ ಸೆಳೆಯಲು ಸರಕಾರ ಮುಂದಾಗಲಿದೆ. ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಗ್ರಾಮೀಣಾಭಿವೃದ್ಧಿ, ನೀರಾವರಿ, ಆರೋಗ್ಯ, ಶಿಕ್ಷಣ ಸೇರಿದಂತೆ ಎಲ್ಲ ವಲಯಗಳ ಅಭಿವೃದ್ಧಿಗೆ ಪೂರಕವಾದ ಬಜೆಟ್ ಇದಾಗಿರುವುದು ಸ್ವಾಗತಾರ್ಹ’

-ಜಗದೀಶ್ ಶೆಟ್ಟರ್, ಮಾಜಿ ಸಿಎಂ, ಪರಿಷತ್ ಸದಸ್ಯ

------------------------------------------

‘ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಒಂದು ರೀತಿ ಪ್ರತೀಕಾರದ ಬಜೆಟ್. ಈ ಬಜೆಟ್ ರಾಜ್ಯ ಸರಕಾರದ್ದೆ ಆದರೂ ಕೇಂದ್ರ ಬಿಜೆಪಿ ಸರಕಾರವನ್ನು ಗುರಿ ಮಾಡಿರುವುದು ಕಂಡುಬರುತ್ತದೆ. ಇದೊಂದು ನಿರಾಶಾದಾಯಕ, ಪ್ರಗತಿಹೀನ ಬಜೆಟ್. ಪ್ರಗತಿಗೆ ಪೂರಕ ಅಂಶಗಳು ಈ ಬಜೆಟ್‍ನಲ್ಲಿ ಇಲ್ಲ. ತಮ್ಮ ಚುನಾವಣಾ ಗೆಲುವಿಗೆ ಬೇಕಾದ ಗ್ಯಾರಂಟಿ ಮೂಲಕ ಏನೇನು ವಾಗ್ದಾನ ನೀಡಿದ್ದರೋ ಅದರ ಅನುμÁ್ಠನಕ್ಕೆ ಕರ್ನಾಟಕದ ಗರಿಷ್ಠ ತೆರಿಗೆ ಹಣವನ್ನು ಮೀಸಲಿಡುವ ಥರ ಆಗಿದೆ’

-ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಜ್ಯಾಧ್ಯಕ್ಷ

------------------------------------------

‘ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಾಖಲೆಯ 14ನೆ ಬಾರಿಗೆ ಮಂಡಿಸಿರುವ ಬಜೆಟ್ ಮಹಿಳೆಯರು, ದಲಿತರು, ರೈತರು, ಅಲ್ಪಸಂಖ್ಯಾತರು, ಬಹುಸಂಖ್ಯಾತರು ಮತ್ತು ಉದ್ದಿಮೆದಾರರು ಸೇರಿದಂತೆ ಸಮಾಜದ ಎಲ್ಲ ಸಮುದಾಯಗಳ ಒಳಿತಿನ ಬಗ್ಗೆ ಗಮನ ಹರಿಸಿರುವ ಜನಪರ ಬಜೆಟ್ ಆಗಿದೆ. ಜತೆಗೆ, ಕಳೆದ ನಾಲ್ಕು ವರ್ಷಗಳಲ್ಲಿ ಬಿಜೆಪಿ ಸರಕಾರ ಮಾಡಿದ ಅಕ್ರಮಗಳನ್ನು ಇದು ರಾಜ್ಯದ ಜನರಿಗೆ ತೋರಿಸಿದೆ’

-ಎಂ.ಬಿ.ಪಾಟೀಲ್, ಬೃಹತ್ ಕೈಗಾರಿಕಾ ಸಚಿವ

------------------------------------------

‘ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯದ ಮೂಲ ಮಂತ್ರದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಅಭಿವೃದ್ಧಿಗೆ ಪೂರಕ. ಅಲ್ಪಸಂಖ್ಯಾತ ಸಮುದಾಯದ ಶಿಕ್ಷಣ ಮತ್ತು ಉದ್ಯೋಗ ಸೃಷ್ಟಿಗೆ ಬಜೆಟ್ ನಲ್ಲಿ ಒತ್ತು ನೀಡಿರುವುದರ ಜತೆಗೆ 2,101 ಕೋಟಿ ರೂ.ಒದಗಿಸಿ ಬಿಜೆಪಿ ಅವಧಿಯಲ್ಲಿ ಸ್ಥಗಿತಗೊಳಿಸಲಾಗಿದ್ದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿ ವೇತನ ಪುನರಾರಂಭಗೊಳಿಸಿರುವುದಕ್ಕೆ ಕೃತಜ್ಞತೆಗಳು’

-ಝಮೀರ್ ಅಹ್ಮದ್ ಖಾನ್, ಅಲ್ಪಸಂಖ್ಯಾತರ ಕಲ್ಯಾಣ ಸಚಿವ

------------------------------------------

‘ಬಜೆಟ್‍ನಲ್ಲಿನ ತೆರಿಗೆ ಪ್ರಸ್ತಾವವಂತೂ ಭವಿಷ್ಯದಲ್ಲಿ ‘ಸಿದ್ದು ಟ್ಯಾಕ್ಸ್’ ಎಂದೇ ಲೋಕ ವಿಖ್ಯಾತಿಯಾಗುವ ಅಪಾಯ ಇದೆ. ಅಬಕಾರಿಯೊಂದನ್ನು ಹೊರತುಪಡಿಸಿ ಇನ್ಯಾವ ವಿಭಾಗದಲ್ಲೂ ತೆರಿಗೆ ಹೆಚ್ಚಳದ ಪ್ರಮಾಣ ನಮೂದಿಸಿಲ್ಲ. ಭವಿಷ್ಯದಲ್ಲಿ ನಾಗರಿಕರ ಜೇಬಿಗೆ ಕತ್ತರಿಯ ಬದಲು ಗರಗಸವನ್ನೆ ಹಾಕುವ ಸಾಧ್ಯತೆ ಹೆಚ್ಚಿದೆ’

-ವಿ.ಸುನೀಲ್ ಕುಮಾರ್, ಬಿಜೆಪಿ ಶಾಸಕ

----------------------------------------------------

ಬೆಲೆ ಏರಿಕೆ ಮತ್ತು ಆದಾಯ ಕುಸಿತದಿಂದ ಕಂಗೆಟ್ಟಿರುವ ಜನತೆಗೆ ತಾತ್ಕಾಲಿಕ ಪರಿಹಾರವಾಗಿ ಗ್ಯಾರಂಟಿಗಳು ಸಹಕಾರಿ. ಇತರ ಆದ್ಯತಾ ವಲಯಗಳನ್ನು ಕೈಬಿಟ್ಟಿರುವ ಕ್ರಮಕ್ಕೆ ಎಸ್‍ಯುಸಿಐನ ಆಕ್ಷೇಪವಿದೆ. ಎನ್‍ಇಪಿ ರದ್ದು, ಶಾಲಾ-ಕಾಲೇಜು ಕಟ್ಟಡಗಳ ಮರು ನಿರ್ಮಾಣ, ಬಡ ವಿದ್ಯಾರ್ಥಿಗಳ ವಿದ್ಯಾರ್ಥಿವೇತನಗಳ ಮರುಜಾರಿ, ಸ್ವಿಗ್ಗಿ, ಜೊಮ್ಯಾಟೋ ಕೆಲಸಗಾರರಿಗೆ ವಿಮಾ ಯೋಜನೆ ಇತ್ಯಾದಿ ಕಾರ್ಯಕ್ರಮಗಳನ್ನು ಎಸ್‍ಯುಸಿಐ(ಸಿ) ಸ್ವಾಗತಿಸುತ್ತದೆ’

-ಕೆ.ಉಮಾ ರಾಜ್ಯ ಕಾರ್ಯದರ್ಶಿ, ಎಸ್‍ಯುಸಿಐ

.................

‘ದುಂದುವೆಚ್ಚ ತಡೆಯಲು ಕಾಂಗ್ರೆಸ್ ಸರಕಾರ ಗಮನ ನೀಡಿಲ್ಲ. ಸಂಪನ್ಮೂಲ ಸಂಗ್ರಹದಲ್ಲಿ ಸರಕಾರ ಪ್ರಾರಂಭದಲ್ಲಿಯೇ ಸೋತಂತೆ ಕಾಣುತ್ತಿದೆ. ಜನತೆಯ ಮೇಲೆ ತೆರಿಗೆ ಹೊರೆಯನ್ನು ಹೊರಿಸಿದೆ. ನಿರುದ್ಯೋಗಿ ಯುವಕರಿಗೆ ಭತ್ಯೆ ನೀಡಲು ಬಜೆಟ್‍ನಲ್ಲಿ ಅನುದಾನ ಮೀಸಲಿಟ್ಟಿಲ್ಲ. ಗ್ಯಾರಂಟಿ ಹೆಸರಿನಲ್ಲಿ ನೀರಾವರಿ ಯೋಜನೆಗಳನ್ನು ಕಡೆಗಣಿಸಿದ ಸರಕಾರ, ರಾಜ್ಯಕ್ಕೆ ಹಂಚಿಕೆಯಾದ ನೀರನ್ನು ಬಳಕೆ ಮಾಡಲು ಚಿಂತನೆ ಮಾಡಿಲ್ಲ.

-ಗೋವಿಂದ ಎಂ.ಕಾರಜೋಳ ಮಾಜಿ ಉಪಮುಖ್ಯಮಂತ್ರಿ

...........................

‘ಇಲ್ಲಿಯವರೆಗೂ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಗಿಗ್ ಆರ್ಥಿಕ ಕ್ಷೇತ್ರವನ್ನು ಸರಕಾರವು ಗುರುತಿಸಿರುವುದು ಸಮಾಧಾನಕರ ಕ್ರಮ. ಹಾಗೆಯೇ ಬಜೆಟ್‍ನಲ್ಲಿ ಸ್ವಿಗ್ಗಿ, ಜೊಮ್ಯಾಟೊದಂತಹ ಗಿಗ್ ಕಂಪೆನಿಗಳಲ್ಲಿ ದುಡಿಯುತ್ತಿರುವವರಿಗೆ ಒಟ್ಟು 4ಲಕ್ಷ ರೂ.ಮೌಲ್ಯದ ಜೀವವಿಮೆ ಮತ್ತು ಅಪಘಾತ ವಿಮೆ ಸೌಲಭ್ಯಗಳನ್ನು ಘೋಷಿಸಿರುವುದು ಸ್ವಾಗತಾರ್ಹ. ಗಿಗ್ ಆರ್ಥಿಕ ಕ್ಷೇತ್ರಕ್ಕೆ ಈ ಕೂಡಲೇ ಒಂದು ಕಾನೂನನ್ನು ರಚಿಸಿ, ಅಲ್ಲಿ ನಡೆಯುತ್ತಿರುವ ತೀವ್ರತರವಾದ ಶೋಷಣೆ ಮತ್ತು ಅನ್ಯಾಯಗಳಿಗೆ ಅಂತ್ಯವಾಡಬೇಕು’.

-ವಿನಯ್‍ಸಾರಥಿ ವಿ. ಅಧ್ಯಕ್ಷರು, ಯುನೈಟೆಡ್ ಫುಡ್ ಡೆಲಿವರಿ ಪಾಟ್ರ್ನರ್ಸ್ ಯೂನಿಯನ್

---------------------------------------

‘ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‍ನಲ್ಲಿ ಬಯಲುಸೀಮೆ ಜಿಲ್ಲೆಗಳ ಬಗ್ಗೆ ತೀವ್ರ ನಿರ್ಲಕ್ಷ್ಯ ತೋರಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ರೇಶ್ಮೆ ಹಾಗೂ ಹೂವು ಬೆಳೆಗಾರರ ಅಭ್ಯುದಯಕ್ಕೆ ಯಾವುದೇ ಭರವಸೆ ಸಿಕ್ಕಿಲ್ಲ. ಕೆಸಿ ವ್ಯಾಲಿ, ಎಚ್‍ಎನ್ ವ್ಯಾಲಿ ಯೋಜನೆಯಡಿ ತೃತೀಯ ಹಂತದ ಶುದ್ಧೀಕರಣ ಕೈಗೊಳಲು ಬಜೆಟ್‍ನಲ್ಲಿ ಹಣ ಮೀಸಲಿಟ್ಟಿಲ್ಲ. ಕಾಂಗ್ರೆಸ್ ಎಲ್ಲವನ್ನೂ ಇದು ರಿವರ್ಸ್ ಮಾಡುವ ಸರಕಾರವಾಗಿದ್ದು, ಅಭಿವೃದ್ಧಿಯೂ ರಿವರ್ಸ್ ಗೇರ್‍ನಲ್ಲಿದೆ’

-ಡಾ.ಕೆ.ಸುಧಾಕರ್, ಮಾಜಿ ಸಚಿವ

................

‘ಸಿದ್ದರಾಮಯ್ಯ ಮಂಡಿಸಿದ ಬಜೆಟ್‍ನಲ್ಲಿ ಶಿಕ್ಷಣ, ಆರೋಗ್ಯ, ಕೃಷಿ ಕ್ಷೇತ್ರಗಳಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕಾಣಬಹುದು. ಆದರೆ, ಬಜೆಟ್‍ನಲ್ಲಿ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಹಿಂಪಡೆಯುವ ಪ್ರಸ್ತಾಪವಿಲ್ಲ. ಕಾರ್ಮಿಕರ ಶೋಷಣೆಗೆ ಅನುಕೂಲವಾಗುವ ಫ್ಯಾಕ್ಟರಿ ಕಾಯ್ದೆ ತಿದ್ದುಪಡಿ ಹಿಂಪಡೆಯುವ ಬಗ್ಗೆಯೂ ಪ್ರಸ್ತಾಪ ಮಾಡದೆ ಈ ಸರಕಾರವು ಕಾರ್ಮಿಕ ವಿರೋಧಿಯಾಗಿ ವರ್ತಿಸಿದೆ. ಪಠ್ಯಪುಸ್ತಕ ಮರುಪರಿಷ್ಕರಣೆ, ಶಿಕ್ಷಣ ಕ್ಷೇತ್ರ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಘೋಷಿಸಿರುವ ಕಾರ್ಯಕ್ರಮಗಳನ್ನು, ದುರ್ಬಲ ವರ್ಗಗಳಿಗೆ ಘೋಷಿಸಿರುವ ಕಾರ್ಯಕ್ರಮಗಳನ್ನು ಸಿಪಿಐ ರಾಜ್ಯ ಮಂಡಳಿ ಸ್ವಾಗತಿಸುತ್ತದೆ’.

-ಸಾತಿ ಸುಂದರೇಶ್, ರಾಜ್ಯ ಕಾರ್ಯದರ್ಶಿ, ಸಿಪಿಐ

................

‘ಪ್ರಸಕ್ತ ಮುಂಗಡ ಪತ್ರವು ಒಟ್ಟು 3,27,747 ಕೋಟಿ ರೂ.ಗಳಾಗಿದ್ದು, ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ 8,884 ಕೋಟಿ ರೂ.ಮೀಸಲಿಟ್ಟಿರುವುದು ಸ್ವಾಗತಾರ್ಹ. ಕೃಷಿ ಉತ್ಪಾಧನೆ, ಉತ್ಪಾದಕತೆ ಹೆಚ್ಚಿಸುವಲ್ಲಿ ನೆರವಾಗಲಿದ್ದು, ಕೃಷಿಕರ ಆದಾಯ ವೃದ್ಧಿಗೆ ಪೂರಕ. ರೈತರ ಸಾಲದ ಮಿತಿಯನ್ನು ಹೆಚ್ಚಿಸಿರುವುದರಿಂದ ಕೃಷಿಯಲ್ಲಿ ಬೆಳೆ ವೈವಿಧ್ಯತೆ, ನೂತನ ತಂತ್ರಜ್ಞಾನಗಳ ಅಳವಡಿಕೆಗೂ ನೆರವಾಗಲಿದೆ.

-ಎಸ್.ವಿ.ಸುರೇಶ, ಬೆಂಗಳೂರಿನ ಕೃಷಿ ವಿವಿಯ ಕುಲಪತಿ

..................

‘ಹೊಸ ಶಿಕ್ಷಣ ನೀತಿಯನ್ನು ಕೈಬಿಟ್ಟು ರಾಜ್ಯಕ್ಕೆ ಪ್ರತ್ಯೇಕ ನೀತಿಯೊಂದನ್ನು ಜಾರಿಗೊಳಿಸುವುದಾಗಿ ಪ್ರಸಕ್ತ ಆಯವ್ಯಯದಲ್ಲಿ ಘೋಷಿಸಿರುವ ಸರಕಾರದ ನಿರ್ಧಾರ ಸ್ವಾಗತಾರ್ಹ. ಪಠ್ಯಪುಸ್ತಕ ಪರಿಷ್ಕರಣೆಗೆ ತಜ್ಞರ ಸಮಿತಿ ನೇಮಕ ಮಾಡಿ ತಿಳಿಸಿದೆ. ಇದು ರಾಜ್ಯದಲ್ಲಿ ಬೆಳೆದ ವಿದ್ಯಾರ್ಥಿ ಹಾಗೂ ಜನ ಚಳುವಳಿಗೆ ಸಂದ ಜಯ’

-ಅಜಯ್ ಕಾಮತ್, ಎಐಡಿಎಸ್‍ಒ ರಾಜ್ಯ ಕಾರ್ಯದರ್ಶಿ

..................

‘ಎಸ್ಸಿಪಿ-ಟಿಎಸ್ಪಿ ಕಾಯ್ದೆಯಲ್ಲಿ 7(ಡಿ) ಕಲಂ ರದ್ದಮಾಡಿ, ದಲಿತರ ಹಣವನ್ನು ದಲಿತರ ಅಭಿವೃದ್ಧಿಗಾಗಿಯೇ ಬಳಸಬೇಕು ಎಂಬುದು ದಲಿತ ಸಂಘಟನೆಗಳ ಹಲವು ವರ್ಷಗಳ ಬೇಡಿಕೆಯಾಗಿತ್ತು. ಸರಕಾರದಲ್ಲಿನ ಕೆಲ ಪಟ್ಟಭದ್ರ ಹಿತಾಸಕ್ತಿಗಳಿಂದ ಈವರೆಗೆ ಈ ಕಲಂ ರದ್ಧಾಗಿರಲಿಲ್ಲ. 7(ಡಿ) ಕಲಂ ರದ್ದುಪಡಿಸುವ ನಿರ್ಧಾರ ತೆಗೆದುಕೊಂಡಿರುವುದು ಸ್ವಾಗತಾರ್ಹ’

-ಮಾವಳ್ಳಿ ಶಂಕರ್, ದಸಂಸ(ಅಂಬೇಡ್ಕರ್ ವಾದ) ಪ್ರಧಾನ ಸಂಚಾಲಕ

......................

‘ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕದ ಕ್ರೈಸ್ತ ಅಭಿವೃದ್ಧಿ ನಿಗಮವನ್ನು ಘೋಷಿಸಿದ್ದು, ಸಮುದಾಯದ ಅನೇಕ ಮುಖಂಡರು, ನಾಯಕರುಗಳು, ಹೋರಾಟ ಮಾಡಿದ ಆ ಪ್ರಯತ್ನಕ್ಕೆ ಸಂದ ಜಯ’

-ಪ್ರಜ್ವಲ್ ಸ್ವಾಮಿ, ಅಖಿಲ ಭಾರತ ಕ್ರೈಸ್ತ ಮಹಾಸಭಾ ಸಂಸ್ಥಾಪಕ ಅಧ್ಯಕ್ಷ

....................

‘ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಡಿಸಿರುವ ಬಜೆಟ್ ಎಂದಿನ ರೀತಿಯಲ್ಲಿ ಸಾಮಾನ್ಯವಾಗಿದ್ದು, ಕೇವಲ ಅವರ ಗ್ಯಾರಂಟಿ ಯೋಜನೆಗಳಿಗಾಗಿ ಮಂಡಿಸಿದ ಯೋಜನೆಯಾಗಿದೆ ಮತ್ತು ಗ್ಯಾರಂಟಿಗಳ ಸುತ್ತ ಗಿರಕಿ ಹೊಡೆದಿದೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಕೈಗೊಳ್ಳಬೇಕಾದ ಇತರೆ ಯೋಜನೆಗಳು ಮತ್ತು ಕಾರ್ಯಕ್ರಮಗಳ ಜಾರಿಗೆ ಸಂಪನ್ಮೂಲದ ಕೊರತೆ ಎದ್ದು ಕಾಣುತ್ತಿದೆ’

-ದೀಪಕ್ ಸಿ.ಎನ್., ಕೆಆರ್‍ಎಸ್ ಪಕ್ಷದ ಪ್ರಧಾನ ಕಾರ್ಯದರ್ಶಿ

.................

‘ರಾಜ್ಯದ ಕಬ್ಬು ಬೆಳೆಗಾರರಿಗೆ ಹೈಕೋರ್ಟ್‍ನ ತಡೆಯಾಜ್ಞೆ ತೆರುವುಗೊಳಿಸಿ ರೈತರಿಗೆ ಹಣ ಕೊಡಿಸಬೇಕು. ಅನ್ನ ಭಾಗ್ಯ ಯೋಜನೆಗೆ 10 ಸಾವಿರ ಕೋಟಿ ರೂ. ಮೀಸಲಿಟ್ಟ ಹಣದಿಂದ ರಾಜ್ಯದ ರೈತರಿಂದಲೇ ಆಕ್ಕಿ ರಾಗಿ ಜೋಳ ಖರೀದಿ ಮಾಡಬೇಕು. ಮೇಕೆದಾಟು ಯೋಜನೆ, ಕಳಸ ಬಂಡೂರಿ ಯೋಜನೆ ಕೇವಲ ಘೋಷಣೆ ಬದಲಾಗಿ ಕಾಮಗಾರಿ ತುರ್ತಾಗಿ ಕೈಗೆತ್ತಿಕೊಳ್ಳಬೇಕು ಎಂಬುದು ನಮ್ಮ ಒತ್ತಾಯವಿದ್ದು, ಈ ಬಗ್ಗೆ ಬಜೆಟ್‍ನಲ್ಲಿ ಸ್ಪಷ್ಟ ಪ್ರತಿಕ್ರಿಯೆ ಇಲ್ಲ’

-ಕುರುಬೂರು ಶಾಂತಕುಮಾರ್, ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ

..............

‘ಸರಕಾರಿ ಶಾಲೆಗಳ ಸಬಲೀಕರಣಕ್ಕೆ ಇಷ್ಟೊಂದು ಪ್ರಮಾಣದ ಹಣವನ್ನು ಈ ಹಿಂದೆ ಯಾವ ಸರಕಾರವು ಮೀಸಲಿಟ್ಟಿರಲಿಲ್ಲ. ಪ್ರಸಕ್ತ ಬಜೆಟ್‍ನಲ್ಲಿ ಸರಕಾರಿ ಶಾಲೆಗಳ ಸಬಲೀಕರಣಕ್ಕೆ 153 ಕೋಟಿ ರೂ.ಗಳನ್ನು ಮೀಸಲಿಟ್ಟಿರುವುದು ಸ್ವಾಗತಾರ್ಹ’

-ಚಂದ್ರಶೇಖರ ನುಗ್ಗಲಿ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಪ್ರಧಾನ ಕಾರ್ಯದರ್ಶಿ

.......................................

‘ಪ್ರಸ್ತುತ ಸಾಲಿನ ಬಜೆಟ್‍ನಲ್ಲಿ ರಾಜ್ಯ ಸರಕಾರವು ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಗೆ 2101 ಕೋಟಿ ರೂ.ಅನುದಾನವನ್ನು ಒದಗಿಸುವುದನ್ನು ಸ್ವಾಗತಿಸುತ್ತೇನೆ. ಆದರೆ, ಈ ಹಿಂದಿನ ಬಿಜೆಪಿ ಸರಕಾರವು ಅಲ್ಪಸಂಖ್ಯಾತರಿಗೆ ಕಡಿಮೆ ಅನುದಾನವನ್ನು ಒದಗಿಸಿ, ಅನ್ಯಾಯ ಎಸಗಿತ್ತು ಎಂದು ಹೈಕೋರ್ಟ್ ವಕೀಲ ರಹಮತ್ ಉಲ್ಲಾ ಕೊತ್ವಾಲ್ ಹೇಳಿದ್ದಾರೆ.

....................

‘ಬಜೆಟ್‍ನಲ್ಲಿ ವಕೀಲರಿಗೆ ಸಂಬಂಧಿಸಿದಂತೆ ಯಾವುದೇ ಯೋಜನೆಗಳನ್ನು ಜಾರಿಗೆ ತಂದಿಲ್ಲ. ಜತೆಗೆ ವಕೀಲರಿಗೆ ಆರೋಗ್ಯ ವಿಮೆ ಯೋಜನೆಯನ್ನು ಜಾರಿಗೊಳಿಸಿಲ್ಲ. ಸರಕಾರಿ ಶಿಕ್ಷಕರಿಗೆ ಹಳೇ ಪಿಂಚಣಿ(ಒಪಿಎಸ್) ಯೋಜನೆಯನ್ನು ಈ ಬಜೆಟ್‍ನಲ್ಲಿ ಮರು ಜಾರಿಗೆ ಘೋಷಣೆ ಮಾಡಬೇಕಿತ್ತು. ಆದರೆ, ಜಾರಿ ಮಾಡದೇ ಶಿಕ್ಷಕರಿಗೆ ಅನ್ಯಾಯ ಎಸಗಿದ್ದಾರೆ’ ಎಂದು ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ, ಜೆಡಿಎಸ್ ಮುಖಂಡ ಎ.ಪಿ.ರಂಗನಾಥ್ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News