ಜೈನ ಸಮುದಾಯದ ರಕ್ಷಣೆಗೆ ರಾಜ್ಯ ಸರಕಾರ ಬದ್ಧ: ಗೃಹ ಸಚಿವ ಡಾ.ಜಿ.ಪರಮೇಶ್ವರ್
Update: 2023-07-10 09:55 GMT
ಹುಬ್ಬಳ್ಳಿ: ಜೈನ ಸಮುದಾಯದ ರಕ್ಷಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಖಂಡಿಸಿ ಶ್ರೀ ಕ್ಷೇತ್ರ ವರೂರು ನವಗೃಹ ತೀರ್ಥ ಕ್ಷೇತ್ರದ 108 ಆಚಾರ್ಯ ಗುಣಧರ ನಂದಿ ಮಹಾರಾಜರು ಕೈಗೊಂಡಿರುವ ಅಮರಣ ಉಪವಾಸ ನಿರಶನ ಸ್ಥಳಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.
ಜೈನ ಧರ್ಮಗುರುಗಳ ಅಮಾನುಷ ಹತ್ಯೆಗೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಕಾರಣಕರ್ತರು ಯಾರೇ ಆದರೂ ಅವರನ್ನು ಕಾನೂನಿನ ಚೌಕಟ್ಟಿನಲ್ಲಿ ಶಿಕ್ಷೆಗೆ ಒಳಪಡಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.
ಈ ಸಂಧರ್ಭದಲ್ಲಿ ಶಾಸಕರಾದ ಶ್ರೀ ಪ್ರಸಾದ್ ಅಬ್ಬಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಅನಿಲ್ ಕುಮಾರ್ ಪಾಟೀಲ್ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು ಸೇರಿದಂತೆ ಹಿರಿಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.