ಕಾಂತರಾಜು ವರದಿಗೆ ರಾಜ್ಯ ಒಕ್ಕಲಿಗರ ಸಂಘ ವಿರೋಧ: ಡಿಕೆಶಿ, ಎಂ.ಸಿ. ಸುಧಾಕರ್ ಸಹಿತ ಹಲವರ ಸಹಿ !

Update: 2023-11-21 16:47 GMT

ಬೆಂಗಳೂರು: ಎಚ್. ಕಾಂತರಾಜು ಅವರ ನೇತೃತ್ವದ ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿರುವ ’ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ -2015 ವರದಿ️ಯನ್ನು ತಿರಸ್ಕರಿಸಬೇಕೆನ್ನುವ ಪತ್ರಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಅವರು ಸಹಿ ಮಾಡಿರುವ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕಾಂತರಾಜು ಆಯೋಗದ ವರದಿ ತಿರಸ್ಕರಿಸುವ ಸಂಬಂಧ ಇತ್ತೀಚಿಗೆ ರಾಜ್ಯ ಒಕ್ಕಲಿಗರ ಸಂಘ ಹಾಗೂ ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಮನವಿ ಪತ್ರವನ್ನು ಸಿದ್ಧಪಡಿಸಿತ್ತು. ಇದಕ್ಕೆ ಈಗ ಡಿ.ಕೆ.ಶಿವಕುಮಾರ್ ಹಾಗೂ ಎಂ.ಸಿ.ಸುಧಾಕರ್ ಅವರ ಸಹಿಯನ್ನು ಪಡೆದುಕೊಳ್ಳಲಾಗಿದ್ದು, ಆ ಪತ್ರವನ್ನು ಹಿಂದುಳಿದ ವರ್ಗಗಳ ಆಯೋಗಕ್ಕೆ ಸಲ್ಲಿಸಲಾಗಿದೆ. ಇದರ ಮನವಿ ಪ್ರತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಸಲ್ಲಿಸಲಾಗಿದೆ.

ಮತ್ತೊಂದೆಡೆ ಈ ಪತ್ರಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ, ಎಚ್.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್, ಶಾಸಕ ಅಶ್ವಥ್ ನಾರಾಯಣ ಸಹಿ ಮಾಡಿದ್ದಾರೆ. ಜಾತಿಗಣತಿ ಜಾರಿ ಮಾಡುವ ಸಂಬಂಧ ಈಗಾಗಲೇ ಸಿದ್ದರಾಮಯ್ಯ ಅವರ ಮೇಲೆ ಕೆಲವು ಸಚಿವರು ಒತ್ತಡ ತರುತ್ತಿದ್ದಾರೆ. ಈ ಎಲ್ಲ ಬೆಳವಣಿಗೆ ನಡುವೆ ಡಿ.ಕೆ. ಶಿವಕುಮಾರ್ ಹಾಗೂ ಸಚಿವರ ಸಹಿ ಕುತೂಹಲಕ್ಕೆ ಕಾರಣವಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News