ಮೀಸಲಾತಿ ಕುರಿತ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧ ದೂರು ನೀಡಿದ ಬಿಜೆಪಿ
Update: 2024-09-21 07:47 GMT
ಬೆಂಗಳೂರು, ಸೆ.21: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಬಿಜೆಪಿ ನಿಯೋಗದಿಂದ ದೂರು ನೀಡಲಾಗಿದೆ.
ಮೀಸಲಾತಿ ಬಗ್ಗೆ ಅಮೆರಿಕದಲ್ಲಿ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ದೂರು ಸಲ್ಲಿಸಲಾಗಿದೆ.
ಈ ಸಂದರ್ಭದಲ್ಲಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್, ರಾಜಕುಮಾರ್ ಪಾಟೀಲ್, ಬಿಜೆಪಿ ಕಾನೂನು ಪ್ರಕೋಷ್ಠದ ಸಂಚಾಲಕ ವಸಂತಕುಮಾರ್ ಸಹಿತ ಬಿಜೆಪಿ ನಾಯಕರು ಇದ್ದರು.