‘ಹಿಂದೂ’ ಪದದ ಕುರಿತು ಹೇಳಿಕೆ: ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು
Update: 2024-02-03 15:19 GMT
ಬೆಂಗಳೂರು: ʼಹಿಂದೂʼ ಪದದ ಕುರಿತು ಅವಹೇಳನಾಕಾರಿ ಹೇಳಿಕೆಯನ್ನು ನೀಡಿದ್ದ ಆರೋಪದಡಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ವಿಚಾರಣೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಆದೇಶ ಹೊರಡಿಸಲಾಗಿದೆ.
ಸತೀಸ್ ಜಾರಕಿಹೊಳಿ ಹೇಳಿಕೆ ಸಂಬಂಧ ವಕೀಲ ದಿಲೀಪ್ ಕುಮಾರ್ ಎಂಬುವವರು ನೀಡಿದ್ದ ಖಾಸಗಿ ದೂರಿನ ಪ್ರಕರಣ ಕುರಿತು ಶನಿವಾರ ಅರ್ಜಿ ವಿಚಾರಣೆ ಕೈಗೆತ್ತಿಕೊಂಡು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಚಿವ ಜಾರಕಿಹೊಳಿ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಿ ವಿಚಾರಣೆ ನಡೆಸುವಂತೆ ಆದೇಶಿಸಿದೆ.
2022ರ ನವೆಂಬರ್ 6ರಂದು ಬೆಳಗಾವಿಯಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಸತೀಶ್ ಜಾರಕಿಹೊಳಿ ಹಿಂದು ಎಂಬ ಪದ ಆಶ್ಲೀಲ, ಕೊಳಕು ಎಂಬ ಅರ್ಥ ನೀಡುತ್ತದೆ. ಹಿಂದುತ್ವ ಎಂಬುದು ಪರ್ಷಿಯನ್ ಪದವಾಗಿದೆ ಎಂದು ಉಲ್ಲೇಖಿಸಿ ಹೇಳಿಕೆ ನೀಡಿದ್ದರು. ಈ ಸಂಬಂಧ ದೂರು ದಾಖಲಾಗಿತ್ತು.