ಶಿವಮೊಗ್ಗ ನಗರದಲ್ಲಿ ಮಿಲಾದುನ್ನಬಿ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ: 7ಕ್ಕೂ ಹೆಚ್ಚು ಮಂದಿ ವಶಕ್ಕೆ

Update: 2023-10-01 20:20 IST
ಶಿವಮೊಗ್ಗ ನಗರದಲ್ಲಿ ಮಿಲಾದುನ್ನಬಿ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ: 7ಕ್ಕೂ ಹೆಚ್ಚು ಮಂದಿ ವಶಕ್ಕೆ
  • whatsapp icon

ಶಿವಮೊಗ್ಗ: ಮಿಲಾದುನ್ನಬಿ ಮೆರವಣಿಗೆ ವೇಳೆ ಕಲ್ಲು ತೂರಾಟ ಘಟನೆ ಬಳಿಕ ರಾಗಿಗುಡ್ಡದಲ್ಲಿ 144 ಸೆಕ್ಷನ್‌ ಜಾರಿಗೊಳಿಸಲಾಗಿದೆ. ಈ ವೇಳೆ 7 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ವರದಿಯಾಗಿದೆ.

ಘಟನಾ ಸ್ಥಳದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಜನರು ಗುಂಪು ಸೇರದಂತೆ ಪೊಲೀಸರು ಮೈಕ್‌ ಮೂಲಕ ಸಾರ್ವಜನಿಕರಿಗೆ ಸೂಚನೆ ನೀಡುತ್ತಿದ್ದಾರೆ.

ಇನ್ನು, ರಾಪಿಡ್‌ ಅಕ್ಷನ್‌ ಫೋರ್ಸ್‌ (ಆರ್‌ಎಎಫ್) ಸಿಬ್ಬಂದಿ ರಾಗಿಗುಡ್ಡ ಬಡಾವಣೆಯಲ್ಲಿ ರೂಟ್‌ ಮಾರ್ಚ್‌ ನಡೆಸಿದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News