ಪಾಕಿಸ್ತಾನ ಪರ ಘೋಷಣೆ ಆರೋಪ ಸಾಬೀತಾದರೆ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

Update: 2024-02-28 07:48 GMT

Photo: FB.com/ Siddaramaiah.Official

ಬೆಂಗಳೂರು: ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಲಾಗಿದೆ ಎಂಬ ಆರೋಪದ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ  ಎಕ್ಸ್‌ ನಲ್ಲಿ ಪೋಸ್ಟ್ ಮಾಡಿರುವ ಅವರು,  ಪಾಕಿಸ್ತಾನದ ಪರವಾಗಿ ಘೋಷಣೆ ನಿಜವೇ ಆಗಿದ್ದರೆ ಅಂಥವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಎಫ್. ಎಸ್ .ಎಲ್ ವರದಿ ಬಂದ ನಂತರ ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ ಈ ಬಗ್ಗೆ ಗಂಭೀರ ಕ್ರಮ ವಹಿಸಲಾಗುವುದು.

ಕೂಗುವವರಿಗೆ ವಿಧಾನಸೌಧ ಆದರೇನು? ಬೇರೆ ಎಲ್ಲಾದರೇನು? ಅಪರಾಧ ಅಪರಾಧವೇ. ರಾಷ್ಟ್ರದ ವಿರುದ್ಧ ಘೋಷಣೆ ಕೂಗಿರುವುದು ಸಾಬೀತಾದರೆ ಯಾರೇ ಆಗಲಿ ಅಂಥವರ ಮೇಲೆ ಕಠಿಣ ಕ್ರಮ ವಹಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News