ನ್ಯಾಯ ವಿಳಂಬ ಮಾಡಿದರೆ ಕಠಿಣ ಕ್ರಮ: ಡಿಸಿ, ಜಿಪಂ ಸಿಇಒ ಸಭೆಯಲ್ಲಿ ಸಿಎಂ ಎಚ್ಚರಿಕೆ

Update: 2023-09-12 08:18 GMT

ಬೆಂಗಳೂರು, ಸೆ.12: ತಹಶೀಲ್ದಾರ್, ಉಪವಿಭಾಗಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಬರುವ ಅರ್ಜಿಗಳು 5 ವರ್ಷಕ್ಕೂ ಹೆಚ್ಚು ಅವಧಿಗೆ ಬಾಕಿ ಉಳಿದಿರುವುದನ್ನು ಗಮನಿಸಲಾಗಿದೆ. 5 ವರ್ಷವಾದರೂ ಪ್ರಕರಣ ಇತ್ಯರ್ಥಪಡಿಸದೆ ಇದ್ದರೆ, ನೀವು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಅರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

Justice delayed is justice denied – ವಿಳಂಬ ಜಾಸ್ತಿಯಾದಷ್ಟು ಭ್ರಷ್ಟಾಚಾರಕ್ಕೆ ಅವಕಾಶವಾಗುತ್ತದೆ. ವಿಳಂಬವೂ ಭ್ರಷ್ಟಾಚಾರವೇ. ವಿಳಂಬ ಮಾಡಿದರೆ ತಹಶೀಲ್ದಾರರು ಒಂದು ಅರ್ಜಿಯನ್ನು ಸ್ವೀಕರಿಸಿದರೆ, ಮೂರು ತಿಂಗಳಲ್ಲಿ ಇತ್ಯರ್ಥವಾಗಬೇಕು. ಉಪವಿಭಾಗಾಧಿಕಾರಿಗಳ ಬಳಿ ಬರುವ ಮನವಿಗಳ ಇತ್ಯರ್ಥಕ್ಕೆ ಬಹಳ ವಿಳಂಬ ಮಾಡ್ತಾರೆ. ಇದನ್ನು ಕನಿಷ್ಠ ಆರು ತಿಂಗಳಲ್ಲಿ ಹಾಗೂ ಜಿಲ್ಲಾಧಿಕಾರಿಗಳು ಒಂದು ವರ್ಷದಲ್ಲಿ ಇತ್ಯರ್ಥ ಮಾಡಬೇಕು. ಜಿಲ್ಲಾಧಿಕಾರಿಗಳು ಅನಗತ್ಯವಾಗಿ ಪ್ರಕರಣ ಮುಂದೂಡುವುದು, ಕಕ್ಷಿದಾರರನ್ನು ಕಾಯಿಸುವುದು, ವಾದ-ವಿವಾದಗಳನ್ನು ಆಲಿಸಿದ ನಂತರ ತೀರ್ಪು ಬರೆಯಲು ವಿಳಂಬ ಮಾಡುವುದು ತರವಲ್ಲ. ಪ್ರಕರಣ ಇತ್ಯರ್ಥಗೊಳಿಸಲು ವಿಳಂಬ ಮಾಡಿದರೆ ಸಹಿಸುವುದಿಲ್ಲ, ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಎಚ್ಚರಿಸಿದರು.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News