ಅನುಸೂಚಿತ ಜಾತಿಗಳ ಉಪಹಂಚಿಕೆ ವಿಧೇಯಕ ಮಂಡನೆ

Update: 2023-12-11 16:50 GMT

ಬೆಳಗಾವಿ: ಕರ್ನಾಟಕ ಅನುಸೂಚಿತ ಜಾತಿಗಳ ಉಪ ಹಂಚಿಕೆ ಮತ್ತು ಬುಡಕಟ್ಟು ಉಪ ಹಂಚಿಕೆ ಅಧಿನಿಯಮ-2013 ಅನ್ನು ತಿದ್ದುಪಡಿ ತಂದು ಉಪ ಮುಖ್ಯಮಂತ್ರಿ ಹಾಗೂ ಬುಡಕಟ್ಟು ಕಲ್ಯಾಣ ಮಂತ್ರಿಯನ್ನು ರಾಜ್ಯ ಅನುಸೂಚಿತ ಜಾತಿಗಳು ಅಥವಾ ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ತಿಗೆ ಪದನಿಮಿತ್ತ ಸದಸ್ಯರಾಗಿ ಸೇರಿಸಲು ಅವಕಾಶ ಕಲ್ಪಿಸಲು ವಿಧೇಯಕವನ್ನು ಮಂಡಿಸಲಾಗಿದೆ.

ಬುಡಕಟ್ಟು ಕಲ್ಯಾಣ ಮಂತ್ರಿಯನ್ನು ನೋಡಲ್ ಏಜೆನ್ಸಿಗೆ ಉಪಾಧ್ಯಕ್ಷರಾಗಿ ಸೇರಿಸಲು ಕರ್ನಾಟಕ ಅನುಸೂಚಿತ ಜಾತಿಗಳ ಉಪ ಹಂಚಿಕೆ ಮತ್ತು ಬುಡಕಟ್ಟು ಉಪ ಹಂಚಿಕೆ(ಹಂಚಿಕೆ ಮಾಡಬಹುದಾದ ಆಯವ್ಯಯ ರೂಪಿಸುವುದ, ಆರ್ಥಿಕ ಸಂಪನ್ಮೂಲಗಳ ಹಂಚಿಕೆ ಮತ್ತು ಬಳಕೆ)(ತಿದ್ದುಪಡಿ) ವಿಧೇಯಕ-2023 ಅನ್ನು ಕಾನೂನು ಸಚಿವ ಎಚ್.ಕೆ.ಪಾಟೀಲ್ ಸೋಮವಾರ ವಿಧಾನಸಭೆಯಲ್ಲಿ ಮಂಡಿಸಿದರು.


Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News