ಸುಭಾಷ್ ಚಂದ್ರ ಬೋಸ್ ಅಪ್ರತಿಮ ದೇಶಪ್ರೇಮಿ: ಸಿಎಂ ಸಿದ್ದರಾಮಯ್ಯ

Update: 2024-01-23 09:32 GMT

Photo: facebook.com/Siddaramaiah.Official

ಬೆಂಗಳೂರು: ಜ 23 : ಸುಭಾಷ್ ಚಂದ್ರ ಬೋಸ್ ಅಪ್ರತಿಮ ದೇಶಪ್ರೇಮಿ ಹಾಗೂ ಸ್ವಾತಂತ್ರ್ಯ ಹೋರಾಟಗಾರ. ಅವರು, ಕಾಂಗ್ರೆಸ್ ಅಧ್ಯಕ್ಷರಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರು. ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಗಳವಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 127 ನೇ ಜನ್ಮದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದರೊಂದಿಗೆ ಸಿಎಂ ಮಾತನಾಡಿದರು.

ಗಾಂಧೀಜಿ ಹಾಗೂ ಸುಭಾಷ್ ಚಂದ್ರ ಬೋಸ್ ನಡುವೆ ಸ್ವಾತಂತ್ರ್ಯ ಹೋರಾಟದ ಹಾದಿಯ ಬಗ್ಗೆ ಭಿನ್ನಾಭಿಪ್ರಾಯ ಮೂಡಿತ್ತು. ಮಹಾತ್ಮ ಗಾಂಧೀಜಿ ಶಾಂತಿ, ಅಹಿಂಸೆ ಮೂಲಕ ಸ್ವಾತಂತ್ರ್ಯ ಗಳಿಸಬೇಕು ಎಂದರೆ, ಸುಭಾಷ್ ಚಂದ್ರ ಬೋಸ್ ಅವರಿಗೆ ಅದರ ತದ್ವಿರುದ್ಧವಾದ ನಿಲುವು ಇತ್ತು. ಆದರೆ ಬೇರೆ ವಿಚಾರಗಳಲ್ಲಿ ಗಾಂಧೀಜಿ ಯವರ ಬಗ್ಗೆ ಅಪಾರವಾದ ಗೌರವವಿತ್ತು. ಈ ವಿಚಾರದಲ್ಲಿ ಮಾತ್ರ ಆಲೋಚನೆಗಳಲ್ಲಿ ಭಿನ್ನಾಭಿಪ್ರಾಯ ಇತ್ತು ಎಂದು ತಿಳಿಸಿದರು.

ಭಾರತೀಯ ರಾಷ್ಟ್ರೀಯ ಸೇನೆಯನ್ನು ಸ್ಥಾಪಿಸಿ ಅದರ ಮುಖ್ಯಸ್ಥರಾಗಿದ್ದ ಸುಭಾಷ್ ಚಂದ್ರ ಬೋಸ್ ಅವರು  ಜಪಾನ್ ನಲ್ಲಿ  ವಿಮಾನ ದುರಂತದಲ್ಲಿ  ಸಾವಿಗೀಡಾದರು. ಅಪ್ರತಿಮ ಸ್ವಾತಂತ್ರ್ಯ ಪ್ರೇಮಿ, ದೇಶಪ್ರೇಮಿಯಾಗಿದ್ದ ಸುಭಾಷ್ ಚಂದ್ರ ಬೋಸ್ ಅವರು ನಮಗೆಲ್ಲಾ ಆದರ್ಶ. ಅವರ ಆದರ್ಶಗಳನ್ನು ನಾವೆಲ್ಲರೂ ಅನುಸರಿಸುವುದೇ ಅವರಿಗೆ ಸಲ್ಲಿಸುವ ಗೌರವ. ಅವರ ತತ್ವಾದರ್ಶಗಳು ನಮಗೆ ದಾರಿದೀಪವಾಗಲಿ ಎಂದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News