ನಿರೀಕ್ಷಣಾ ಜಾಮೀನು ಕೋರಿ ಸೂರಜ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣ | ಜುಲೈ.18 ಕ್ಕೆ ತೀರ್ಪು

Update: 2024-07-15 16:34 GMT

ಡಾ.ಸೂರಜ್ ರೇವಣ್ಣ‌

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಡಾ.ಸೂರಜ್ ರೇವಣ್ಣ‌ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಕೋರ್ಟ್ ಜು.18ಕ್ಕೆ ತೀರ್ಪು ಕಾಯ್ದಿರಿಸಿದೆ.

ಹೊಳೆನರಸೀಪುರದ ತಮ್ಮ ಆಪ್ತ ದಾಖಲಿಸಿರುವ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಸೂರಜ್ ರೇವಣ್ಣ‌ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ನ್ಯಾಯಾಧೀಶರು‌ ವಿಚಾರಣೆ ನಡೆಸಿದರು. ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ಜುಲೈ 18 ಕ್ಕೆ ತೀರ್ಪು ಕಾಯ್ದಿರಿಸಿದೆ. ಮತ್ತೊಂದು ಪ್ರಕರಣದಲ್ಲಿ ಬಂಧನ ಆಗಿರುವ ಸೂರಜ್ ಜಾಮೀನು ಅರ್ಜಿಯ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News