ಮುಸ್ಲಿಮರ ಜನಸಂಖ್ಯೆ ತಿಳಿಸಲು ವರದಿಯಲ್ಲಿ ಪಾಕ್ ಧ್ವಜ ಬಳಕೆ | ಸುವರ್ಣ ನ್ಯೂಸ್ - ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ಧ ಎಫ್‌ಐಆರ್ ದಾಖಲು

Update: 2024-05-13 08:27 GMT

ಬೆಂಗಳೂರು : ಸುದ್ದಿ ಬಿತ್ತರಿಸುವಾಗ ಹಿಂದೂಗಳ ಜನಸಂಖ್ಯೆ ತಿಳಸಲು ತ್ರಿವರ್ಣ ಧ್ವಜ ಮತ್ತು ಮುಸ್ಲಿಮರ ಜನಸಂಖ್ಯೆಗೆ ಪಾಕಿಸ್ತಾನದ ಧ್ವಜ ಬಳಕೆ ಮಾಡಿರುವ ಖಾಸಗಿ ಸುದ್ದಿ ವಾಹಿನಿ ಸುವರ್ಣ ನ್ಯೂಸ್ ಮತ್ತು ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 505 (2) ಅಡಿಯಲ್ಲಿ ದ್ವೇಷವನ್ನು ಸೃಷ್ಟಿಸಿದ ಅಥವಾ ಉತ್ತೇಜಿಸಲು ಯತ್ನಿಸಿದ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಚರ್ಚಾ ಕಾರ್ಯಕ್ರಮವೊಂದರಲ್ಲಿ ಭಾರತದ ಮುಸ್ಲಿಂ ಜನಸಂಖ್ಯೆಯನ್ನು ಪ್ರತಿನಿಧಿಸಲು ಪಾಕಿಸ್ತಾನದ ಧ್ವಜವನ್ನು ಬಳಸಿದ್ದಕ್ಕಾಗಿ ತನ್ವೀರ್ ಅಹ್ಮದ್ ಎಂಬವರು ದೂರು ದಾಖಲಿಸಿದ್ದರು. ಈ ದೂರಿನ ಮೇರೆಗೆ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಅಜಿತ್ ಹನುಮಕ್ಕನವರ್ ಅವರು ನಿರೂಪಿಸಿದ, ಪ್ರಧಾನಮಂತ್ರಿಗಳ ಆರ್ಥಿಕ ಸಲಹಾ ಮಂಡಳಿ ಬಿಡುಗಡೆ ಮಾಡಿದ ಜನಸಂಖ್ಯಾ ವರದಿ ಕುರಿತ ಚರ್ಚೆಯಲ್ಲಿ ಈ ಘಟನೆ ವರದಿಯಾಗಿದೆ. ಹಿಂದೂಗಳ ಜನಸಂಖ್ಯೆಯನ್ನು ಸೂಚಿಸಲು ಭಾರತೀಯ ಧ್ವಜವನ್ನು ಮತ್ತು ಮುಸ್ಲಿಂ ಜನಸಂಖ್ಯೆಗೆ ಪಾಕಿಸ್ತಾದ ಧ್ವಜವನ್ನು ಬಳಸಿರುವುದು ವಿವಾದವನ್ನು ಹುಟ್ಟುಹಾಕಿತ್ತು.

ಲೋಕಸಭಾ ಚುನಾವಣೆಯ ನಡುವೆ ಹಿಂದೂ ಜನಸಂಖ್ಯೆಯಲ್ಲಿ ಇಳಿಕೆ ಮತ್ತು ಮುಸ್ಲಿಂ ಜನಸಂಖ್ಯೆಯಲ್ಲಿ ಗಣನೀಯ ಹೆಚ್ಚಳವನ್ನು ಎತ್ತಿ ತೋರಿಸಿರುವ ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಯ ವರದಿಯು ರಾಷ್ಟ್ರದಾದ್ಯಂತ ಚರ್ಚೆಗಳನ್ನು ಹುಟ್ಟುಹಾಕಿದೆ. ಪಾಪ್ಯುಲೇಶನ್ ಫೌಂಡೇಶನ್ ಆಫ್ ಇಂಡಿಯಾ (ಪಿಎಫ್‌ಐ) ನಂತರ ಈ ವಿಷಯದ ಕುರಿತು ಸಮುದಾಯಗಳ ನಡುವೆ ವಿಭಜನೆಯನ್ನು ಸೃಷ್ಟಿಸಲು ವರದಿಯಿಂದ ಮಾಧ್ಯಮಗಳಿಂದ ಸಂಖ್ಯೆಗಳನ್ನು ತಪ್ಪಾಗಿ ನಿರೂಪಿಸುವ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News