ಕೇತಗಾನಹಳ್ಳಿ ಸರಕಾರಿ ಜಮೀನು ಒತ್ತುವರಿ ತೆರವಿಗೆ ತಹಶೀಲ್ದಾರ್‌ಗೆ ಅಧಿಕಾರವಿದೆ: ಹೈಕೋರ್ಟ್‌ಗೆ ರಾಜ್ಯ ಸರಕಾರಿ ಮಾಹಿತಿ
Update: 2025-03-27 14:41 IST

ಬೆಂಗಳೂರು: ರಾಮನಗರದ ಬಿಡದಿಯ ಕೇತಗಾನಹಳ್ಳಿ ಬಳಿ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಲು ತಹಶೀಲ್ದಾರ್‌ಗೆ ಅಧಿಕಾರ ಇದೆ ಎಂದು ರಾಜ್ಯ ಸರಕಾರ ಹೈಕೋರ್ಟ್ ಗೆ ಮಾಹಿತಿ ನೀಡಿದೆ.
6 ಎಕರೆ ಜಮೀನು ಒತ್ತುವರಿ ತೆರವಿಗೆ ತಹಶೀಲ್ದಾರ್ ನೀಡಿರುವ ನೋಟಿಸ್ ಪ್ರಶ್ನಿಸಿ ಎಚ್.ಡಿ.ಕುಮಾರಸ್ವಾಮಿ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎನ್.ಎಸ್. ಸಂಜಯಗೌಡ ಅವರಿದ್ದ ಹೈಕೋರ್ಟ್ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಸರಕಾರದ ಪರ ವಾದ ಮಂಡಿಸಿದ ಎಎಜಿ ಕಿರಣ್ ರೋಣ್, ಕರ್ನಾಟಕ ಭೂ ಕಂದಾಯ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. 2025 ರ ತಿದ್ದುಪಡಿಯನ್ವಯ ತಹಸೀಲ್ದಾರ್ ಗೆ ಒತ್ತುವರಿ ತೆರವು ಅಧಿಕಾರವಿದೆ ಎಂದು ನ್ಯಾಯಪೀಠಕ್ಕೆ ಮಾಹಿತಿ ನೀಡಿದರು.
ಈ ಸಂದರ್ಭ ಎಚ್.ಡಿ.ಕುಮಾರಸ್ವಾಮಿ ಪರ ವಕೀಲರು ರಿಟ್ ಅರ್ಜಿ ತಿದ್ದುಪಡಿಗೆ ಕಾಲಾವಕಾಶ ಕೋರಿದರು. ಅಲ್ಲಿಯವರೆಗೂ ಬಲವಂತದ ಕ್ರಮ ಕೈಗೊಳ್ಳುವುದಿಲ್ಲವೆಂದು ಸರಕಾರದ ಹೇಳಿಕೆ ದಾಖಲಿಸಿಕೊಂಡು ಹೈಕೋರ್ಟ್ ವಿಚಾರಣೆಯನ್ನು ಎ.1 ಕ್ಕೆ ಮುಂದೂಡಿದೆ.