ನ್ಯಾಯಾಂಗ ನಿಂದನೆ ಆರೋಪ | ಸಚಿವ ಝಮೀರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ : ಅಡ್ವೊಕೇಟ್ ಜನರಲ್‌ಗೆ ರಾಜ್ಯಪಾಲರ ನಿರ್ದೇಶನ

Update: 2024-11-10 17:25 GMT

ರಾಜ್ಯಪಾಲ ಥಾವರಚಂದ್ ಗೆಹ್ಲೋಟ್‌(PC : PTI)/ಝಮೀರ್‌ ಅಹ್ಮದ್

ಬೆಂಗಳೂರು : ಮುಡಾ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಹೈಕೋರ್ಟ್ ಆದೇಶದ ಕುರಿತು ಪ್ರತಿಕ್ರಿಯೆ ನೀಡಿದ್ದ ಸಚಿವ ಝಮೀರ್ ಅಹ್ಮದ್ ಖಾನ್ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ.

ಹೈಕೋರ್ಟ್ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿ ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಝಮೀರ್ ಅಹ್ಮದ್ ಖಾನ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಅಡ್ವೊಕೇಟ್ ಜನರಲ್‌ಗೆ ನಿರ್ದೇಶನ ನೀಡಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ನೀಡಿದ್ದ ದೂರಿನ ಮೇರೆಗೆ ಸಚಿವ ಝಮೀರ್ ಅಹ್ಮದ್ ಹೇಳಿಕೆ ಸಂಬಂಧ ಅಡ್ವೋಕೇಟ್ ಜನರಲ್‌ಗೆ ರಾಜ್ಯಪಾಲರು ಪತ್ರ ಬರೆದಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆಂದು ಗೊತ್ತಾಗಿದೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದರು. ಈ ಸಂಬಂಧ ಹೈಕೋರ್ಟ್ ತನಿಖೆಗೆ ಆದೇಶಿಸಿತ್ತು. ಈ ತೀರ್ಪನ್ನು ಬಗ್ಗೆ ಝಮೀರ್ ಅಹಮ್ಮದ್ ಖಾನ್, ‘ರಾಜಕೀಯ ಪ್ರೇರಿತ ತೀರ್ಪು’ ಎಂದು ಹೇಳಿದ್ದರು. ಬಳಿಕ ಕ್ಷಮೆ ಕೋರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News