ಬೆಂಗಳೂರಿನಲ್ಲಿ ತಲೆಯೆತ್ತಲಿದೆ ಅತಿ ಎತ್ತರದ ವೀಕ್ಷಣಾ ಗೋಪುರ; ಮಾಹಿತಿ ಹಂಚಿಕೊಂಡ ಡಿಕೆಶಿ

Update: 2023-10-17 18:17 GMT

ಬೆಂಗಳೂರು: ನಗರದಲ್ಲಿ ವೀಕ್ಷಣಾ ಗೋಪುರ ನಿರ್ಮಾಣದ ಬಗ್ಗೆ ಬೆಂಗಳೂರು ನಗಾರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಟ್ವಿಟರ್‌ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. 

ಗೋಪುರ ನಿರ್ಮಾಣಕ್ಕೆ ಜಾಗ ಗುರುತಿಸಲು ಅಧಿಕಾರಿಗಳಿಗೆ ಅವರು ಸೂಚನೆ ನೀಡಿದ್ದು, ʼʼದೇಶದಲ್ಲೇ ಅತಿ ಎತ್ತರದ ವೀಕ್ಷಣಾ ಗೋಪುರ ಎನ್ನುವ ಕೀರ್ತಿಗೆ ಪಾತ್ರವಾಗಲಿದೆʼʼ ಎಂದು ಅವರು ತಿಳಿಸಿದ್ದಾರೆ. 

ಈ ಕುರಿತು ಎಕ್ಸ್‌ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ʼʼಆಸ್ಟ್ರೀಯಾ ಮೂಲದ COOP HIMMELB(L)AU ಸಂಸ್ಥೆಯು ವರ್ಲ್ಡ್‌ ಡಿಸೈನ್ ಆರ್ಗನೈಸೇಶನ್ ಸಹಕಾರದೊಂದಿಗೆ ಬೆಂಗಳೂರಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸ್ಕೈ ಡೆಸ್ಕ್ ಯೋಜನೆಯನ್ನು ಪರಿಶೀಲಿಸಿದೆ. ಇದು ನಿರ್ಮಾಣವಾದ ನಂತರ ದೇಶದಲ್ಲೇ ಅತಿ ಎತ್ತರದ ವೀಕ್ಷಣಾ ಗೋಪುರ ಎನ್ನುವ ಕೀರ್ತಿಗೆ ಪಾತ್ರವಾಗಲಿದೆʼʼ ಎಂದು ಹೇಳಿದ್ದಾರೆ. 

 ʼʼಯೋಜನೆಯ ಅನುಷ್ಠಾನಕ್ಕೆ ಸೂಕ್ತವಾದ 8-10 ಎಕರೆ ಭೂಮಿಯನ್ನು ಗುರುತಿಸುವುದರ ಜೊತೆಗೆ ಆರ್ಥಿಕ ಕಾರ್ಯಸಾಧ್ಯತೆಯನ್ನು ನಿರ್ಣಯಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆʼʼ ಎಂದು ಡಿ.ಕೆ ಶಿವಕುಮಾರ್‌ ಬರೆದುಕೊಂಡಿದ್ದಾರೆ. 

 

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News