ರಾಜ್ಯದಲ್ಲಿ ಏಳು ದಿನಗಳ ಕಾಲ ಒಣಹವೆ, ಉಷ್ಣಾಂಶದಲ್ಲಿ ಹೆಚ್ಚಳ

Update: 2025-02-25 22:31 IST
ರಾಜ್ಯದಲ್ಲಿ ಏಳು ದಿನಗಳ ಕಾಲ ಒಣಹವೆ, ಉಷ್ಣಾಂಶದಲ್ಲಿ ಹೆಚ್ಚಳ

ಸಾಂದರ್ಭಿಕ ಚಿತ್ರ

  • whatsapp icon

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಒಣಹವೆ ಮುಂದುವರೆಯಲಿದ್ದು, ಉಷ್ಣಾಂಶ ಹೆಚ್ಚಾಗುವ ಸಾಧ್ಯತೆ ಇದೆ. ಕಲಬುರಗಿ ಸೇರಿ ಕರಾವಳಿಯ ಜಿಲ್ಲೆಗಳಲ್ಲಿ ಗರಿಷ್ಟ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್ ನಿಂದ 38 ಡಿಗ್ರಿ ಸೆಲ್ಸಿಯಸ್‍ವರೆಗೆ ಇರಲಿದೆ. ದಕ್ಷಿಣ ಒಳನಾಡಿನಲ್ಲಿ 32 ಡಿಗ್ರಿ ಸೆಲ್ಸಿಯಸ್ ನಿಂದ 34 ಡಿಗ್ರಿ ಸೆಲ್ಸಿಯಸ್‍ವರೆಗೆ ಉಷ್ಣಾಂಶ ಇರಲಿದೆ.

ಮಂಗಳವಾರ(ಫೆ.25) ಕಲಬುರಗಿಯಲ್ಲಿ 36.9 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಚಾಮರಾಜನಗರದಲ್ಲಿ 14.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಗರಿಷ್ಠ ತಾಪಮಾನವು ಕಾರವಾರದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಾಗಿದೆ.

ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ ಮತ್ತು ಹಾವೇರಿಯಲ್ಲಿ 32-34 ಡಿಗ್ರಿ ಸೆಲ್ಸಿಯಸ್, ವಿಜಯಪುರ, ಗದಗ,  ಕೊಪ್ಪಳ, ರಾಯಚೂರು ಮತ್ತು ಬಾಗಲಕೋಟೆಯಲ್ಲಿ 31-33 ಡಿಗ್ರಿ ಸೆಲ್ಸಿಯಸ್, ಆಗುಂಬೆ, ಚಿತ್ರದುರ್ಗ,  ದಾವಣಗೆರೆ, ಮಂಡ್ಯ, ಶಿವಮೊಗ್ಗದಲ್ಲಿ 34-35 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News