ಕಲಬುರಗಿಯಲ್ಲಿ 40 ಡಿಗ್ರಿ ಸೆಲ್ಸಿಯಸ್ ಗಿಂತ ಅಧಿಕ ಉಷ್ಣಾಂಶ ದಾಖಲು

ಸಾಂದರ್ಭಿಕ ಚಿತ್ರ (PTI)
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ತಾಪಮಾನ ಏರಿಕೆಯಾಗುತ್ತಿದ್ದು, ಸೋಮವಾರದಂದು ಕಲಬುರಗಿಯಲ್ಲಿ 40.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ 35, ಮಂಗಳೂರಿನಲ್ಲಿ 34 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಕರಾವಳಿ ಪ್ರದೇಶಗಳಾದ ಹೊನ್ನಾವರ 33.5, ಕಾರವಾರ 34.4, ಪಣಂಬೂರು 34.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ 36, ಬೆಳಗಾವಿ ವಿಮಾನ ನಿಲ್ದಾಣ 37, ಬೀದರ್ 38.2, ವಿಜಯಪುರ 38.6, ಬಾಗಲಕೋಟೆ 38, ಧಾರವಾಡ 35.6, ಗದಗ 37.6, ಹಾವೇರಿ 37, ಕೊಪ್ಪಳ 34.7, ರಾಯಚೂರು 39 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ 36.5, ಚಿಕ್ಕಮಗಳೂರು 31.4, ಚಿತ್ರದುರ್ಗ 37, ದಾವಣಗೆರೆ 36, ಹಾಸನ 33.6, ಚಿಂತಾಮಣಿ 35.2, ಮಂಡ್ಯ 33.7, ಮಡಿಕೇರಿ 32.6, ಮೈಸೂರು 35.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಎ.2 ರಿಂದ ಎ.5ರವರೆಗೆ ಗರಿಷ್ಠ ತಾಪಮಾನವು 3 ಡಿಗ್ರಿ ಸೆಲ್ಸಿಯಸ್ ನಿಂದ 5 ಡಿಗ್ರಿ ಸೆಲ್ಸಿಯಸ್ ವರೆಗೆ ಇಳಿಮುಖವಾಗುವ ಸಾಧ್ಯತೆ ಇದೆ. ಅಲ್ಲದೆ, ಎ.3 ಮತ್ತು ಎ.4ರಂದು ರಾಜ್ಯದ ಕೆಲ ಭಾಗಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ.
ಎ.1 ಮತ್ತು ಎ.2ರಂದು ರಾಜ್ಯದ ಕೆಲ ಭಾಗಗಳಲ್ಲಿ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ. ಎ.3 ಮತ್ತು ಎ.4ರಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನದ ಕೆಲವು ಕಡೆಗಳಲ್ಲಿ ಗುಡುಗು ಮಿಂಚಿನ ಮಳೆಯಾಗಲಿದ್ದು, ಈ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.