ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿ : ಮತ್ತೋರ್ವ ಕನ್ನಡಿಗ ಮೃತ್ಯು
Update: 2025-04-22 22:10 IST
PC : PTI
ಬೆಂಗಳೂರು: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಮತ್ತೋರ್ವ ಕನ್ನಡಿಗ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ದಾಳಿಯಲ್ಲಿ ಶಿವಮೊಗ್ಗದ ಮಂಜುನಾಥ್ ಅಲ್ಲದೇ ಮತ್ತೊಬ್ಬ ಕನ್ನಡಿಗ ಬೆಂಗಳೂರಿನ ನಿವಾಸಿ ಭರತ್ ಭೂಷಣ್ ಎಂಬವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಮುಖ್ಯಮಂತ್ರಿಗಳ ಸೂಚನೆ ಹಿನ್ನಲೆಯಲ್ಲಿ ಕನ್ನಡಿಗರ ರಕ್ಷಣೆಗೆ ಈಗಾಗಲೇ ಕರ್ನಾಟಕದಿಂದ ಅಧಿಕಾರಿಗಳು ಹಾಗೂ ಪೊಲೀಸರ ತಂಡ ಕಾಶ್ಮೀರಕ್ಕೆ ತರಳಿದೆ.