‘ಸುವರ್ಣ ಮಹೋತ್ಸವ ಪ್ರಶಸ್ತಿ’ ಮೊತ್ತ 1 ಲಕ್ಷ ರೂ.ಗೆ ಏರಿಕೆ : ಸಚಿವ ಶಿವರಾಜ್ ತಂಗಡಗಿ

Update: 2024-10-31 15:31 GMT

ಶಿವರಾಜ್ ತಂಗಡಗಿ

ಬೆಂಗಳೂರು: ಕರ್ನಾಟಕ ಸಂಭ್ರಮ-50 ಸುವರ್ಣ ಮಹೋತ್ಸವ ಆಚರಣೆಯ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ 50 ಮಹಿಳಾ ಸಾಧಕಿಯರು ಹಾಗೂ 50 ಪುರುಷ ಸಾಧಕರಿಗೆ ‘ಸುವರ್ಣ ಮಹೋತ್ಸವ ಪ್ರಶಸ್ತಿ’ಯನ್ನು ಈಗಾಗಲೇ ಘೋಷಣೆ ಮಾಡಿದ್ದು, ಪ್ರಶಸ್ತಿ ಮೊತ್ತವನ್ನು 1ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ  ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.

ಗುರುವಾರ ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ಪ್ರಶಸ್ತಿ ಮೊತ್ತ 50 ಸಾವಿರ ರೂ.ಎಂದು ತಿಳಿಸಲಾಗಿತ್ತು. ಇದೊಂದು ಐತಿಹಾಸಿಕ ಸಂದರ್ಭವಾಗಿರುವುದರಿಂದ ಈ ಪ್ರಶಸ್ತಿ ಮೊತ್ತವನ್ನು 1ಲಕ್ಷ ರೂ.ಗಳಿಗೆ ಹೆಚ್ಚಿಸುವುದು ಸೂಕ್ತವೆಂದು ಸರಕಾರ ಅಭಿಪ್ರಾಯ ಪಟ್ಟಿರುವುದರಿಂದ ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತವನ್ನು 1ಲಕ್ಷ ರೂ.ಗಳೆಂದು ಘೋಷಿಸಲು ಹರ್ಷಿಸುತ್ತೇನೆ ಎಂದು ಹೇಳಿದ್ದಾರೆ.

ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತ ಹೆಚ್ಚಳಕ್ಕೆ ಕಾರಣಕರ್ತರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರುಗಳಿಗೆ ಈ ಸಂದರ್ಭದಲ್ಲಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಶಿವರಾಜ್ ತಂಗಡಗಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News