ರಾಜಕೀಯದಲ್ಲಿ ''ಆಪರೇಷನ್'' ಎಂಬ ಕೆಟ್ಟ ಶಬ್ದ ಬಂದಿದ್ದು ಬಿಜೆಪಿಯಿಂದ: ಸಚಿವ ಬೋಸರಾಜು

Update: 2023-08-28 14:58 GMT

ಮಡಿಕೇರಿ ಆ.28 : ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತವನ್ನು ಒಪ್ಪಿ ಅನೇಕರು ಪಕ್ಷಕ್ಕೆ ಸೇರ್ಪಡೆಯಾಗಲು ಮುಂದೆ ಬರುತ್ತಿದ್ದಾರೆ. ಇದನ್ನು ಆಪರೇಷನ್ ಹಸ್ತ ಎಂದು ಕರೆಯುವುದು ಸರಿಯಲ್ಲ, ಆಪರೇಷನ್ ಎಂಬ ಕೆಟ್ಟ ಶಬ್ಧ ಬಂದಿದ್ದು ಬಿಜೆಪಿಯಿಂದ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ತಿಳಿಸಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರಮೋದಿ ಅವರ ತಂತ್ರಗಾರಿಕೆ ಕರ್ನಾಟಕದಲ್ಲಿ ನಡೆಯುವುದಿಲ್ಲ. ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತಯಾರಿ ನಡೆಸುತ್ತಿದೆ. ರಾಷ್ಟ್ರೀಯ ನಾಯಕರು ಈಗಾಗಲೇ ಸಭೆ ನಡೆಸಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಉಸ್ತುವಾರಿ ಸಚಿವರಿಗೆ ಜವಾಬ್ದಾರಿ ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನುಡಿದ್ದಂತೆ ನಡೆದಿದ್ದಾರೆ ಎಂದರು.

ಆಪರೇಷನ್ ಹಸ್ತ ಪದ ಬಳಕೆ ನಾವು ಮಾಡಲ್ಲ, ಆಪರೇಷನ್ ಎಂಬ ಕೆಟ್ಟ ಶಬ್ಧ ಬಂದಿದ್ದು ಬಿಜೆಪಿಯಿಂದ. ಹಲವು ರಾಜ್ಯಗಳಲ್ಲಿ ಬಿಜೆಪಿ ಆಪರೇಷನ್ ಕಮಲ ಮಾಡಿದೆ. ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಹಲವರು ಮುಂದೆ ಬರುತ್ತಿದ್ದಾರೆ. ಕಲ್ಯಾಣ ಕರ್ನಾಟಕದ ನಾಯಕರು ಕೂಡ ನನ್ನ ಸಂಪರ್ಕದಲ್ಲಿದ್ದಾರೆ. ಎಲ್ಲರೂ ಕಾಂಗ್ರೆಸ್ ತತ್ವ ಸಿದ್ಧಾಂತವನ್ನು ಒಪ್ಪಿ ಪಕ್ಷಕ್ಕೆ ಸೇರ್ಪಡೆಯಾಗಲು ಮುಂದೆ ಬರುತ್ತಿದ್ದಾರೆ ಎಂದ ಭೋಸರಾಜು, ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕನಿಲ್ಲದೆ ಅಧಿವೇಶನ ನಡೆದಿದ್ದು, ಇಂದಿಗೂ ಬಿಜೆಪಿ ಪರಿಸ್ಥಿತಿ ಬದಲಾಗಿಲ್ಲ ಎಂದು ವ್ಯಂಗ್ಯವಾಡಿದರು.

ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಮತ್ತಿತರ ಪ್ರಮುಖರು ಈ ಸಂದರ್ಭ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News