ಬೆಂಕಿ ಅವಘಡದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬಿಬಿಎಂಪಿ ಮುಖ್ಯ ಇಂಜಿನಿಯರ್ ಮೃತ್ಯು

Update: 2023-08-30 13:26 GMT
ಚಿತ್ರ-  ಸೋಮವಾರ ಆಸ್ಪತ್ರೆಗೆ ಭೇಟಿ ನೀಡಿದ್ದ ಡಿ.ಕೆ ಶಿವಕುಮಾರ್‌ 

ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿರುವ 'ಗುಣ ನಿಯಂತ್ರಣ' ಪ್ರಯೋಗಾಲಯದಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮುಖ್ಯ ಇಂಜಿನಿಯರ್ ಶಿವಕುಮಾರ್ (45) ಇಂದು (ಬುಧವಾರ) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ಧಾರೆ ಎಂದು ವರದಿಯಾಗಿದೆ.

ಗಾಯಗೊಂಡಿದ್ದ 9 ಜನರಲ್ಲಿ ಉಳಿದ ಎಂಟು ಜನರಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಶಿವಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಅವರನ್ನು ವಾರದ ಹಿಂದೆ ಶೇಷಾದ್ರಿಪುರದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.

ಪ್ರಕರಣದಲ್ಲಿ ಶೇ.40ರಷ್ಟು ಸುಟ್ಟಗಾಯಗಳಿಂದ ಗಂಭೀರವಾಗಿ ಗಾಯಗೊಂಡಿದ್ದ ಶಿವಕುಮಾರ್, ಬಿಬಿಎಂಪಿ (BBMP) ಕ್ವಾಲಿಟಿ ಕಂಟ್ರೋಲ್ ರೂಂ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಖಾಸಗಿ ಅಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 

“ಮುಖ್ಯ ಇಂಜಿನಿಯರ್ ಶಿವಕುಮಾರ್ ಅವರ ಅಗಲಿಕೆ ಸುದ್ದಿ ಕೇಳಿ ಬೇಸರವಾಗಿದೆ. ಕೆಲ ದಿನಗಳ ಹಿಂದಷ್ಟೇ ನಾನು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದೆ. ವೈದ್ಯರು ಉತ್ತಮ ಚಿಕಿತ್ಸೆ ನೀಡಿದರೂ ಅವರ ಸ್ಥಿತಿ ಚಿಂತಾಜನಕವಾಗಿತ್ತು. ಅವರು ಗುಣಮುಖರಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದೆವು. ನಮ್ಮ ಪ್ರಾರ್ಥನೆ ಫಲ ನೀಡಲಿಲ್ಲʼʼ ಎಂದು  ಶಿವಕುಮಾರ್ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News