3 ಡಿಸಿಎಂ ನೇಮಕ ನಿರ್ಧಾರ ಹೈಕಮಾಂಡ್‍ಗೆ ಬಿಟ್ಟಿದ್ದು: ಸಚಿವ ಸತೀಶ್ ಜಾರಕಿಹೊಳಿ

Update: 2023-11-13 14:45 GMT

ಬೆಳಗಾವಿ, ನ.13: ಮೂರು ಡಿಸಿಎಂ ನೇಮಕ ಹೈಕಮಾಂಡ್‍ಗೆ ಬಿಟ್ಟಿದ್ದು, ಆದರೆ, ಯಾರೂ ಸಹ ಚಳಿಗಾಲ ಅಧಿವೇಶನದೊಳಗೆ ಡಿಸಿಎಂ ಆಗುವುದಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಸೋಮವಾರ ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರಕ್ಕೆ ಲಿಂಗಾಯತ, ಚಿಕ್ಕೋಡಿಯಲ್ಲಿ ಕುರುಬ ಸಮುದಾಯಕ್ಕೆ ಕಾಂಗ್ರೆಸ್ ಟಿಕೆಟ್ ನೀಡಲು ಚಿಂತನೆ ನಡೆದಿದೆ. ರಾಜ್ಯದ 20 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವ ಗುರಿ ಹೊಂದಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಲೋಕಸಭೆ ಚುನಾವಣೆಗೆ ಈಗಾಗಲೇ ತಯಾರಿ ನಡೆಸಿದ್ದೇವೆ. ಕಾರ್ಯಕರ್ತರು ಚುನಾವಣೆ ಎದುರಿಸಲು ಸಿದ್ಧರಾಗಿದ್ದು, ಎಲ್ಲ ರೀತಿಯ ಮಾನದಂಡಗಳನ್ನು ಅನುಸರಿಸಿ, ಮೂರು ಹಂತಗಳಲ್ಲಿ ಚರ್ಚಿಸಿದ ನಂತರ ಅಂತಿಮವಾಗಿ ಹೈಕಮಾಂಡ್ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ ಎಂದು ಅವರು ಹೇಳಿದರು.

ಇಲ್ಲಿವರೆಗೆ ಯಾವುದೇ ಸಚಿವರಿಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಹೈಕಮಾಂಡ್ ಹೇಳಿಲ್ಲ. ಇನ್ನು ಅಭ್ಯರ್ಥಿಗಳ ಆಯ್ಕೆಗಾಗಿ ಮೊದಲು ಅರ್ಜಿ ಕರೆಯಲಾಗುತ್ತೆ. ಚುನಾವಣೆಗೆ ಸ್ಪರ್ಧಿಸಲು ಇಚ್ಛಿಸುವವರು ಅರ್ಜಿ ಸಲ್ಲಿಸಬೇಕು. ಅರ್ಜಿಗೆ ಯಾವುದೇ ರೀತಿಯ ಶುಲ್ಕ ಇರುವುದಿಲ್ಲ ಎಂದ ಅವರು, ರಾಹುಲ್ ಜಾರಕಿಹೊಳಿ, ಮೃಣಾಲ್ ಹೆಬ್ಬಾಳಕರ್ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಎಲ್ಲಿಯೂ ಹೇಳಿಲ್ಲ ಎಂದು ತಿಳಿಸಿದರು.

ಇನ್ನೂ, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ಕೆಲವು ಚಿಕ್ಕ ವಯಸ್ಸಿನ ಯುವಕರು ಗುಂಪು ಕಟ್ಟಿಕೊಂಡು ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದಾರೆ. ಅದೇ ಕಾರಣದಿಂದ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಲ್ಲಿ ಕೊಲೆಗಳು ಆಗುತ್ತಿವೆ. ಇದಕ್ಕೆ ಪೊಲೀಸ್ ಅಧಿಕಾರಿಗಳು ಕಾರಣರಲ್ಲ. ಪೆÇಲೀಸರ ಗಮನಕ್ಕೆ ಬಂದರೆ ಘಟನೆಗಳನ್ನು ತಡೆಯುತ್ತಾರೆ. ಆದರೆ, ಆಕಸ್ಮಿಕವಾಗಿ ನಡೆದರೆ ಏನು ಮಾಡುವುದು ಎಂದು ಅವರು ನುಡಿದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News