ಶಾಲಾ ಶಿಕ್ಷಕರ ಬೇಡಿಕೆಗಳ ಪರಿಶೀಲಿಸಲು ಸಮಿತಿ ರಚಿಸಿದ ಸರಕಾರ

Update: 2024-09-24 13:02 GMT

ಬೆಂಗಳೂರು : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಕುರಿತು ಪರಿಶೀಲಿಸಿ ವರದಿ ನೀಡಲು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಅಧ್ಯಕ್ಷತೆಯನ್ನು ಸಮಿತಿಯನ್ನು ರಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಆರ್ಥಿಕ ಇಲಾಖೆ ಪ್ರತಿನಿಧಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಪ್ರತಿನಿಧಿ, ಕಾನೂನು ಇಲಾಖೆಯ ಪ್ರತಿನಿಧಿ ಸಮಿತಿಯ ಸದಸ್ಯರಾಗಿರುತ್ತಾರೆ. ಶಾಲಾ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಿಕ್ಷಣ ವಿಭಾಗದ ನಿರ್ದೇಶಕರು ಸಮಿತಿಯ ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ)ದ ವಿವಿಧ ಬೇಡಿಕೆಗಳನ್ನು ಪರಿಗಣಿಸುವ ಕುರಿತು ಪ್ರಸ್ತುತ ಅಸ್ತಿತ್ವದಲ್ಲಿರುವ ನಿಯಮಗಳನ್ವಯ ಸಮಗ್ರವಾಗಿ ವರಿಶೀಲಿಸಿ ಸೂಕ್ತ ಶಿಫಾರಸು ಹಾಗೂ ಸ್ಪಷ್ಟ ಅಭಿಪ್ರಾಯವನ್ನೊಳಗೊಂಡ ಸಮಗ್ರ ವರದಿಯನ್ನು ನೀಡಲು ಸಮಿತಿಯನ್ನು ರಚಿಸಲಾಗಿದೆ. ವರದಿಯನ್ನು ಒಂದು ತಿಂಗಳೊಳಗಾಗಿ ಸರಕಾರಕ್ಕೆ ಸಲ್ಲಿಸಬೇಕು ಎಂದು ಹೇಳಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News