‘ಅಡಿಕೆ ಬೆಳೆಗೆ ಎಲೆ ಚುಕ್ಕಿ ರೋಗ’ ಸರಕಾರ ಗಂಭೀರವಾಗಿ ಪರಿಗಣಿಸಿದೆ: ಸಚಿವ ಚಲುವರಾಯಸ್ವಾಮಿ

Update: 2023-12-05 12:38 GMT

ಬೆಳಗಾವಿ,: ಮಲೆನಾಡು, ಕರಾವಳಿ ಹಾಗೂ ಮಧ್ಯ ಕರ್ನಾಟಕ ಭಾಗದ ಕೆಲವು ಕಡೆ ಅಡಿಕೆ ಬೆಳೆಗೆ ಕಾಡುತ್ತಿರುವ ಎಲೆ ಚುಕ್ಕಿ ರೋಗವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.

ಮಂಗಳವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ರುದ್ರೇಗೌಡ ಪ್ರಶ್ನೆಗೆ ಉತ್ತರಿಸಿದ ಅವರು, ಈ ರೋಗದಿಂದ ತೊಂದರೆಗೆ ಒಳಗಾದ ರೈತರಿಗೆ ಈಗಾಗಲೇ ಸರಕಾರದಿಂದ ಪರಿಹಾರ ಕೊಡಲಾಗಿದೆ. ಈ ಎಲೆ ಚುಕ್ಕೆ ರೋಗ ರೈತರಿಗೆ ತೊಂದರೆ ಕೊಡುತ್ತಿದೆ. ಇದರಿಂದ ಸಾಕಷ್ಟು ಹಾನಿಯಾಗಿದೆ ಎಂಬುದು ನಮ್ಮ ಗಮನಕ್ಕೆ ಬಂದಿದ್ದು, ಇದನ್ನು ತೊಡೆದುಹಾಕಲು ಸಾಕಷ್ಟು ಪ್ರಮಾಣದಲ್ಲಿ ಕ್ರಮ ಕೈಗೊಳ್ಳಲು ಸರಕಾರ ಮುಂದಾಗಿದೆ ಎಂದು ತಿಳಿಸಿದರು.

 ರೋಗವನ್ನು ತಡೆಗಟ್ಟಲು ಸಂಶೋಧನೆ ನಡೆಸಲು ಸರಕಾರ ಮುಂದಾಗಿದ್ದು, ಈ ಸಂಬಂಧ ಸಂಶೋಧನೆಗೆ ಹಣ ಕೂಡ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News