RTI ಅರ್ಜಿದಾರರ ಮಾಹಿತಿಯನ್ನು ಕೋರಿದ್ದ ಆದೇಶ ಹಿಂಪಡೆದ ರಾಜ್ಯ ಸರಕಾರ

Update: 2023-10-06 14:34 GMT

ಬೆಂಗಳೂರು, ಅ.6: ತ್ರೈಮಾಸಿಕ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯ ಮಾಹಿತಿಯನ್ನು ಕೋರಿರುವ ಅರ್ಜಿದಾರರ ಮಾಹಿತಿಯನ್ನು ಒದಗಿಸುವ ಕುರಿತು ಹೊರಡಿಸಲಾಗಿರುವ ಆದೇಶವನ್ನು ತಕ್ಷಣದಿಂದ ಹಿಂಪಡೆಯಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ಮುನೀಷ್ ಮೌದ್ಗಿಲ್ ಸರಕಾರದ ಎಲ್ಲ ಕಾರ್ಯದರ್ಶಿಗಳಿಗೆ ಪತ್ರವನ್ನು ಬರೆದಿದ್ದಾರೆ.

ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ಮಾಹಿತಿ ಕೋರಿ ಅರ್ಜಿ ಸಲ್ಲಿಸಿದರವ ಬಗ್ಗೆ ಯಾರು ಮಾಹಿತಿಯನ್ನು ಪಡೆಯಲು ಅವಕಾಶ ಇರುವುದಿಲ್ಲ. ಎಲ್ಲ ನಾಗರಿಕರಿಕರಿಗೆ ಮಾಹಿತಿ ಹಕ್ಕು ಅಧಿನಿಯಮದ ಪ್ರಕಾರ ಮುಕ್ತವಾಗಿ ಮಾಹಿತಿಯನ್ನು ಪಡೆಯಲು ಶಾಸನಬದ್ದ ಅಧಿಕಾರ ಇರುತ್ತದೆ. ಆದರೆ ಮಾಹಿತಿ ಆಯುಕ್ತರು ಆರ್‍ಟಿಐ ಸಲ್ಲಿಸುವವರ ವಿವರವನ್ನು ಕೋರಿರುತ್ತಾರೆ. ಹಾಗಾಗಿ ಸರಕಾರ ಎಲ್ಲ ಇಲಾಖೆಗಳಿಗೆ ಮಾಹಿತಿ ನೀಡುವಂತೆ ಪತ್ರ ಬರೆದಿದ್ದಾರೆ. ಇದನ್ನು ಈಗ ಹಿಂಪಡೆಯಾಗಿದೆ ಎಂದು ತಿಳಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News