ಕರ್ನಾಟಕ ವಿರೋಧಿ ಹೇಳಿಕೆ ಕೊಡೋದು ಕೆಲವರ ಅಭ್ಯಾಸ: ಪ್ರಿಯಾಂಕ್‌ ಖರ್ಗೆ

Update: 2023-11-29 10:34 GMT

Photo: facebook

ಬೆಂಗಳೂರು:  ಐಟಿ ಉದ್ಯಮಕ್ಕೆ ಪೂರಕ ವಾತಾವರಣ ಕಲ್ಪಿಸಿಕೊಡುವಲ್ಲಿ ಸರ್ಕಾರ ವಿಫಲವಾಗುತ್ತಿದೆ ಎಂಬರ್ಥದಲ್ಲಿ ಉದ್ಯಮಿ ಟಿವಿ ಮೋಹನ್​ ದಾಸ್ ಪೈ  ಮಾಡಿರುವ ಟ್ವೀಟ್​ಗೆ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 

ಮೋಹನ್ ದಾಸ್ ಪೈ ಗೆ ಮಾಹಿತಿ ಕೊರತೆ ಇದೆ. ಒಂದೇ ಒಂದು ಸಿಂಗಲ್ ಕಂಪನಿ ಕರ್ನಾಟಕ ಬಿಟ್ಟು ಹೋಗಿಲ್ಲ. ಕರ್ನಾಟಕ ವಿರೋಧಿ ಹೇಳಿಕೆ ಕೊಡೋದು ಕೆಲವರಿಗೆ ಹ್ಯಾಬಿಟ್ ಆಗಿದೆ. ಇದನ್ನು ಪದೇ ಪದೇ ಮಾಡುವುದು ಸರಿಯಲ್ಲ.ಇದೇ ಮೋಹನ್ ದಾಸ್ ಪೈ ಬೇರೆ ಬೇರೆ ರಾಜ್ಯಗಳ ಕಂಪನಿಗೆ ಬಂಡವಾಳ ಹಾಕುವುದಿಲ್ವಾ? ಅವರು ಡೈವರ್ಸಿಫಿಕೇಷನ್ ಮಾಡಿದ್ರೆ ಸರಿ, ಬೇರೆಯವರು ಮಾಡಿದ್ರೆ ತಪ್ಪಾ? ಕನ್ನಡಿಗರ ಪರವಾಗಿ ಮಾತನಾಡುವುದು ಬಿಟ್ಟು ಈ ರೀತಿ ಮಾತನಾಡಬಾರದು. ಅವರು ಒಂದೇ ಒಂದು ಕಂಪನಿಯ ಉದಾಹರಣೆ ನೀಡಲಿ ನೋಡೋಣ. ಸುಮ್ಮನೆ ಗಾಳಿಯಲ್ಲಿ ಗುಂಡು ಹಾಕುವುದು ಬೇಡ. ಇವರೇ ಅಲ್ವಾ ಎಲ್ಲ ವಿಷನ್ ಗ್ರೂಪ್ ನಲ್ಲಿ ಇದ್ದವರು? ಫಿಲಿಪ್ಸ್ ಇನೊವೇಶನ್ ರಾಜ್ಯಕ್ಕೆ ಬಂದಾಗ ಇವರು ಬೆನ್ನು ತಟ್ಟಿದ್ರಾ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪದೇ ಪದೇ ಯಾಕೆ ಹೀಗೆ ನೆಗೆಟಿವ್ ಆಗಿ ಮಾತನಾಡ್ತಾರೆ ಗೊತ್ತಿಲ್ಲ. ಸಕಾರಾತ್ಮಕವಾಗಿ ಎಲ್ಲರ ಅಭಿಪ್ರಾಯ ಸಂಗ್ರಹ ಮಾಡ್ತೇವೆ. ಯಾವ ಬಂಡವಾಳ ಕೂಡ ರಾಜ್ಯದಿಂದ ವಾಪಸ್ ಹೊರಗಡೆ ಹೋಗಿಲ್ಲ. ಅವರ ಮಾತುಗಳಿಂದ ರಾಜ್ಯಕ್ಕೆ ಬಂಡವಾಳ ಬರುತ್ತದೆ ಎಂದು ಭಾವಿಸುತ್ತೇವೆ. ಸರ್ಕಾರಕ್ಕೆ ಬ್ಲ್ಯಾಕ್ ಮೇಲ್ ಮಾಡುವಂತ ವ್ಯಕ್ತಿ ಅವರಲ್ಲ. ಆದರೆ ಪದೇ ಪದೇ ಕರ್ನಾಟಕ ವಿರೋಧಿ ನಿಲುವು ತಾಳಬಾರದು ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News