ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ನೀಡಿದ ಹಂಸಲೇಖ

Update: 2023-10-15 06:56 GMT

ಮೈಸೂರು,ಅ.15: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ಖ್ಯಾತ ಸಂಗೀತ ನಿದೇರ್ಶಕ ನಾದಬ್ರಹ್ಮ ಹಂಸಲೇಖ ಸಾಂಪ್ರದಾಯಕವಾಗಿ ಉದ್ಘಾಟಿಸಿದರು.

ಬರಗಾಲ ಸಂಭವಿಸಿರುವ ಸಂದರ್ಭದಲ್ಲಿ ಸರಳವೂ ಅಲ್ಲದೆ ಅದ್ದೂರಿಯೂ ಅಲ್ಲದೆ ಸಾಂಪ್ರದಾಯಿಕವಾಗಿ ಚಾಮುಂಡಿ ಬೆಟ್ಟದಲ್ಲಿ ಹಾಕಲಾಗಿದ್ದ ಬೃಹತ್ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕಯಮಾರ್ ಅವರ ಸಮ್ಮುಖದಲ್ಲಿ 10.15 ರಿಂದ 10.30 ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ವಿಶೇಷ ಪೂಜೆಯೊಂದಿಗೆ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಲಾಯಿತು.

ಸಾಂಪ್ರದಾಯಿಕ ದಸರಾ ಆಚರಣೆಯಲ್ಲಿ ನಂದಿಧ್ವಜ ಕುಣಿತದ, ನಾದಸ್ವರದ ಮೂಲಕ ಉದ್ಘಾಟಕರು ಮತ್ತು ಗಣ್ಯರನ್ನು ಸ್ವಾಗತಿಸಲಾಯಿತು.

ಬೆಳ್ಳಿ ಪಲ್ಲಕ್ಕಿಯಲ್ಲಿ ಅಲಂಕೃತ ಗೊಂಡಿದ್ದ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಚಾಮುಂಡಿ ಬೆಟ್ಟದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ನಾಡಿನಲ್ಲಿ ಮಳೆ ಬೆಳೆಯಾಗಿ ಸಮೃದ್ಧಿಗೊಳ್ಳಲಿ ಎಂದು ಹರಸಿದರು.

ದಸರಾ ಯದ್ಘಾಟನೆಯನ್ನು ಕಣ್ತುಂಬಿಕೊಳ್ಳಲು ನಾಡಿನ ವಿವಿಧ ಭಾಗಗಳಿಂದ ಜನರು ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ್ದರು.

ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಜಿ.ಟಿ.ದೇವೇಗೌಡ, ಅಧ್ಯಕ್ಷತೆ ವಹಿಸಿದ್ದರು.ಮೈಸೂರು ಮೇಯರ್ ಶಿವಕುಮಾರ್, ಇಂಧನ ಸಚಿವ ಕೆ.ಜೆ.ಜಾಜ್೯, ಪಶುಸಂಗೋಪನಾ ಮತ್ತು ರೇಷ್ಮೆ ಕೆ.ವೆಂಕಟೇಶ್, ಕನ್ನಡ ಮತ್ತು ಸಂಸಕ್ಋತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಆಹಾರ ನಾಗರೀಕ ಫೂರೈಕೆ ಸಚಿವ ಕೆ.ಎಚ್.ಮುನಿಯಪ್ಪ, ಸಂಸದ ಪ್ರತಾಪ್ ಸಿಂಹ, ಶಾಸಕರುಗಳಾದ ತನ್ವೀರ್ ಸೇಠ್, ಎ.ಆರ್.ಕೃಷ್ಣಮೂರ್ತಿ, ಟಿ.ಎಸ್.ಶ್ರೀವತ್ಸ,ವ ಸದಸ್ಯ ಮರಿತಿಬ್ಬೇಗೌಡ, ಉಪ ಮೇಯರ್ ಡಾ.ಜಿ.ರೂಪ, ಜಿಲ್ಲಾಧಿಕಾರಿ ದಸರಾ ವಿಶೇಷಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಜಿ.ಪಂ.ಸಿಇಓ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ನಗರಪಾಲಿಕೆ ಆಯುಕ್ತ ಅಸಾದ್ ಉರ್ ರೆಹಮಾನ್ ಶರೀಫ್, ಡಿಡಿಪಿಐ ಪಾಂಡುರಂಗ,ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಎಂ.ಕೆ.ಸವಿತ, ಸೇರಿದಂತೆ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು.

ದಸರಾ ಉದ್ಘಾಟನೆ ಹಿನ್ನಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಹೋಗುವ ವಾಹನಗಳನ್ನು ಮೈಸೂರು ನಗರದ ಕುರುಬಾರಹಳ್ಳಿ ಸರ್ಕಲ್ ನಲ್ಲಿಯೇ ತಪಾಸಣೆ ನಡೆಸಿ ಬಿಡಲಾಯಿತು.

ಪೊಲೀಸರು ಚಾಮುಂಡಿ ಬೆಟ್ಟಕ್ಕೆ ಹೋಗುವ ಎಲ್ಲಾ ಮಾರ್ಗಗಳಲ್ಲೂ ತಪಾಸಣೆ ಮಾಡಿ ಬಿಡುತ್ತಿದ್ದರು. ಚಾಮುಂಡಿ ಬೆಟ್ಟ ಸೇರಿದಂತೆ ಮೈಸೂರು ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

 

 

 

 

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News