ವಕ್ಫ್ ಜಮೀನು ಒತ್ತುವರಿ ತೆರವು ಕೋರಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್
Update: 2024-12-17 09:14 GMT
ಬೆಂಗಳೂರು: ರಾಜ್ಯದಲ್ಲಿ ವಕ್ಫ್ ಗೆ ಸೇರಿದ ಜಮೀನು ಒತ್ತುವರಿ ತೆರವಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿದೆ.
ಸೈಯದ್ ಇಜಾಝ್ ಅಹ್ಮದ್ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ, ನ್ಯಾ.ಕೆ.ವಿ.ಅರವಿಂದ್ ಅವರಿದ್ದ ಪೀಠ ಈ ಆದೇಶ ನೀಡಿದೆ.
1.12 ಲಕ್ಷ ಎಕರೆ ಜಮೀನು ಒತ್ತುವರಿಯಾಗಿರುವ ಬಗ್ಗೆ ವರದಿಯಿದೆ. ರಾಜಕೀಯ ಕಾರಣಕ್ಕೆ ಸರಕಾರ ಒತ್ತುವರಿ ತೆರವು ತಡೆಹಿಡಿದಿದೆ. ಒತ್ತುವರಿ ತೆರವು ಬಗ್ಗೆ ನ್ಯಾಯಾಂಗ ತನಿಖೆಗೆ ಮನವಿ ಮಾಡಲಾಗಿತ್ತು. ಆದರೆ ನ್ಯಾಯಪೀಠ ವಕ್ಫ್ ಕಾಯ್ದೆ ಉಲ್ಲಂಘನೆಯಾಗಿದ್ದರೆ ವೈಯಕ್ತಿಕವಾಗಿ ಪ್ರಶ್ನಿಸಬಹುದು. ಆದರೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಊರ್ಜಿತವಲ್ಲವೆಂದು ಆದೇಶಿಸಿದೆ.