ರಾಹುಲ್ ಖರ್ಗೆ ಟ್ರಸ್ಟಿಗೆ ನಿಯಮಾನುಸಾರ ನಿವೇಶನ: ಸಚಿವ ಎಂ.ಬಿ. ಪಾಟೀಲ್
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಪುತ್ರ ರಾಹುಲ್ ಖರ್ಗೆ ಅವರ ‘ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್’ಗೆ ಏರೋಸ್ಪೇಸ್ ಪಾರ್ಕ್‍ನಲ್ಲಿ ಸಿಎ ನಿವೇಶನವನ್ನು ಕಾನೂನಿನ ಪ್ರಕಾರವೇ ನಿಗದಿತ ಬೆಲೆಗೆ ಕೊಡಲಾಗಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಖರ್ಗೆ ಅವರು ಅಲ್ಲಿ ಸಂಶೋಧನೆ ಮತ್ತು ತರಬೇತಿ ಕೇಂದ್ರ ಸ್ಥಾಪಿಸುವುದಾಗಿ ಹೇಳಿದ್ದಾರೆ. ಇದರಲ್ಲಿ ಬಿಜೆಪಿ ನಾಯಕ ಲೆಹರ್ ಸಿಂಗ್ ಆರೋಪಿಸಿರುವಂತೆ ಯಾವ ನಿಯಮವೂ ಉಲ್ಲಂಘನೆ ಆಗಿಲ್ಲ ಎಂದು ಹೇಳಿದರು.
ರಾಹುಲ್ ಖರ್ಗೆ ಐಐಟಿ ಪದವೀಧರರಾಗಿದ್ದಾರೆ. ಅವರ ಕುಟುಂಬವು ನಾನಾ ಬಗೆಯ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದೆ. ಕೆಐಎಡಿಬಿ ನಿಯಮಗಳ ಪ್ರಕಾರ ಸಿ.ಎ ನಿವೇಶನಗಳಲ್ಲಿ ಆರ್ ಅಂಡ್ ಡಿ ಕೇಂದ್ರಗಳು, ಉತೃ ಷ್ಟತಾ ಕೇಂದ್ರಗಳು, ತಾಂತ್ರಿಕ ಸಂಸ್ಥೆಗಳು, ಕೌಶಲ್ಯಾಭಿವೃದ್ಧಿ, ಸರಕಾರಿ ಕಚೇರಿಗಳು, ಬ್ಯಾಂಕು, ಆಸ್ಪತ್ರೆ, ಹೋಟೆಲ್, ಪೆಟ್ರೋಲ್ ಬಂಕ್, ಕ್ಯಾಂಟೀನ್, ವಸತಿ ಸೌಲಭ್ಯ ಇತ್ಯಾದಿಗಳ ಅಭಿವೃದ್ಧಿಗೆ ಅವಕಾಶವಿದೆ ಎಂದು ಅವರು ತಿಳಿಸಿದರು.
ಆಸಕ್ತರು ಯಾರು ಬೇಕಾದರೂ ಇದಕ್ಕೆ ಪ್ರಯತ್ನಿಸಬಹುದು. ರಾಜ್ಯ ಮಟ್ಟದ ಏಕಗವಾಕ್ಷಿ ಸಮಿತಿಯ ಶಿಫಾರಸಿನ ನಂತರವμÉ್ಟೀ ಇವುಗಳ ಹಂಚಿಕೆಯಾಗುತ್ತದೆ. ಏರೋಸ್ಪೇಸ್ ಪಾರ್ಕಿನಲ್ಲಿ ರಾಹುಲ್ ಅವರಿಗೆ ಕೈಗಾರಿಕಾ ನಿವೇಶನವನ್ನೇನೂ ಕೊಟ್ಟಿಲ್ಲ. ಬದಲಿಗೆ, ಸಿ.ಎ ನಿವೇಶನವನ್ನು ಆರ್ ಅಂಡ್ ಡಿ ಕೇಂದ್ರ ಸ್ಥಾಪನೆಗಾಗಿ ನಿಗದಿತ ಬೆಲೆಗೆ ಕೊಡಲಾಗಿದೆ. ಇದರಲ್ಲಿ ಅವರಿಗೆ ಯಾವ ರಿಯಾಯಿತಿಯನ್ನೂ ನೀಡಿಲ್ಲ ಎಂದು ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದರು.
ಈ ಹಿಂದೆ ಬಿಜೆಪಿ ಸರಕಾರದಲ್ಲಿ ಚಾಣಕ್ಯ ವಿಶ್ವವಿದ್ಯಾಲಯಕ್ಕೆ ಕೈಗಾರಿಕಾ ಪ್ರದೇಶದಲ್ಲೇ 116 ಎಕರೆಯನ್ನು ಬರೀ 50 ಕೋಟಿ ರೂ.ಗೆ ಕೊಡಲಾಗಿದೆ. ಅದರಿಂದ 137 ಕೋಟಿ ರೂ. ಬೊಕ್ಕಸಕ್ಕೆ ನಷ್ಟವಾಗಿದೆ. ಲೆಹರ್ ಸಿಂಗ್ ಈ ಬಗ್ಗೆಯೂ ಚಕಾರ ಎತ್ತಬಹುದಲ್ಲವೇ ಎಂದು ಅವರು ಪ್ರಶ್ನಿಸಿದರು.
ಹಿಂದೆಲ್ಲ ಕೆಐಎಡಿಬಿ ಮಂಡಳಿಯೇ ಸಿ.ಎ ನಿವೇಶನಗಳನ್ನು ಹಂಚುತ್ತಿತ್ತು. ಆದರೆ, ನಾನು ಸಚಿವನಾದ ಮೇಲೆ ರಾಜ್ಯಮಟ್ಟದ ಏಕ ಗವಾಕ್ಷಿ ಸಮಿತಿ ಅನುಮೋದನೆ ನೀಡುವ ಹಾಗೆ ಪಾರದರ್ಶಕ ವ್ಯವಸ್ಥೆ ಜಾರಿ ಮಾಡಲಾಗಿದೆ. ಅಲ್ಲದೆ ಮೊದಲ ಬಾರಿಗೆ ಸಿ.ಎ ನಿವೇಶನಗಳ ಹಂಚಿಕೆಯಲ್ಲೂ ಪರಿಶಿಷ್ಟರಿಗೆ ಶೇ.24.10ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. ಲೆಹರ್ ಸಿಂಗ್ ಈ ಸತ್ಯವನ್ನು ಅರಿತು ಮಾತನಾಡುವುದು ಒಳ್ಳೆಯದು ಎಂದು ಎಂ.ಬಿ.ಪಾಟೀಲ್ ತಿರುಗೇಟು ನೀಡಿದರು.