ಜುಲೈ 10ರಿಂದ ಅಕ್ಕಿ ಬದಲು ಹಣ ಕೊಡುವ ಪ್ರಕ್ರಿಯೆ ಪ್ರಾರಂಭ: ಸಿಎಂ ಸಿದ್ದರಾಮಯ್ಯ

Update: 2023-07-01 07:33 GMT

ಬೆಂಗಳೂರು: 'ಬಿಪಿಎಲ್ ಕಾರ್ಡ್​ದಾರರಿಗೆ ಅಕ್ಕಿ ಬದಲು ಹಣ ನೀಡುವ  ಪ್ರಕ್ರಿಯೆ ಜುಲೈ 10ರಿಂದ ಶುರುವಾಗುತ್ತೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. 

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಜುಲೈನಲ್ಲಿ ಅಕ್ಕಿ ಬದಲು ಹಣ ಕೊಡ್ತೇವೆ ಅಂತಾ ಹೇಳಿದ್ದೆವು. ಆದರೆ ಜುಲೈ 1ರಂದೇ ಹಣ ಕೊಡುತ್ತೇವೆ ಅಂತಾ ಹೇಳಿಲ್ಲ. ಈ ತಿಂಗಳಿನಿಂದಲೇ ಅನ್ನಭಾಗ್ಯ, ಗೃಹಜ್ಯೋತಿ ಯೋಜನೆ ಜಾರಿ ಮಾಡಿದ್ದೇವೆ'' ಎಂದರು. 

'ಗೃಹಜ್ಯೋತಿ ಯೋಜನೆ ಈ ತಿಂಗಳಿನಿಂದ ಉಚಿತವಾಗಲಿದೆ.  ಆಗಸ್ಟ್ ನ ಬಿಲ್ ಉಚಿತವಾಗಿರಲಿದೆ' ಎಂದು ಸ್ಪಷ್ಟಪಡಿಸಿದರು. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News