ಬೆಂಗಳೂರಿನ ಅಭಿವೃದ್ಧಿಗೆ ರಾಜ್ಯ ಕಾಂಗ್ರೆಸ್ ಸರಕಾರ ನಯಾಪೈಸೆ ಬಿಡುಗಡೆ ಮಾಡಿಲ್ಲ : ಆರ್.ಅಶೋಕ್

Update: 2024-05-24 12:07 GMT

ಬೆಂಗಳೂರು : ಬೆಂಗಳೂರು ನಗರದ ಅಭಿವೃದ್ಧಿಗೆ ರಾಜ್ಯದ ಕಾಂಗ್ರೆಸ್ ಸರಕಾರ ಒಂದು ನಯಾಪೈಸೆಯನ್ನೂ ಬಿಡುಗಡೆ ಮಾಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಆರೋಪಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, "ಮುಖ್ಯಮಂತ್ರಿಗಳು ಹೋಗಿ ಫೋಟೊ ಶೋ ಮಾಡುವುದು ಬಿಟ್ಟರೆ ಬೇರೇನೂ ಕೆಲಸ ಆಗುತ್ತಿಲ್ಲ. ಕಮಿಷನರ್ ಅವರು ಮಳೆಗೆ ಸಂಬಂಧಿಸಿ ಎಲ್ಲ ಮಾಡಿದ್ದಾಗಿ ಒಂದು ತಿಂಗಳ ಹಿಂದೆಯೇ ಹೇಳಿಕೆ ನೀಡಿದ್ದರು. ಪಾಲಿಕೆ ಎಲ್ಲ ಸಿದ್ಧತೆ ಮಾಡಿದ್ದರೆ ಸಿಎಂ ಸ್ಥಳ ಭೇಟಿ ಮಾಡುವ ಪ್ರಮೇಯ ಯಾಕೆ ಬಂತು? ಎಂದು ಪ್ರಶ್ನಿಸಿದರು.

ರಾಜ್ಯ ಸರಕಾರ ಪಾಪರ್ ಆಗಿದೆಯೇ?. ಹಿಂದೆ ಯಡಿಯೂರಪ್ಪ ಅವರು ಒಂದು ವರ್ಷದಲ್ಲಿ 7 ಸಾವಿರ ಕೋಟಿ ವಿಶೇಷ ಅನುದಾನ ನೀಡಿದ್ದರು. ಬಸವರಾಜ ಬೊಮ್ಮಾಯಿಯವರು 6,700 ಕೋಟಿ ಬಿಡುಗಡೆ ಮಾಡಿದ್ದರು. ಕಾಂಗ್ರೆಸ್ಸಿನ ಯೋಗ್ಯತೆಗೆ ಎಷ್ಟು ಬಿಡುಗಡೆ ಮಾಡಿದ್ದಾರೆಂದು ಹೇಳಲಿ ಎಂದು ಸವಾಲೆಸೆದರು. 

ಗುತ್ತಿಗೆದಾರರಿಗೆ ಬಿಲ್ ಪಾವತಿಸಲು ಹಣ ಇಲ್ಲದೆ ಗುತ್ತಿಗೆದಾರರು ಆತ್ಮಹತ್ಯೆಗೆ ಮುಂದಾಗಿದ್ದರು. ಕಮಿಷನ್ ಆಪಾದನೆ ಮಾಡಿದ್ದರು. ಈ ಸ್ಥಿತಿಯಲ್ಲಿ ರಾಜ್ಯ ಸರಕಾರದ ಪಾತ್ರ ಏನು ಎಂದು ಕೇಳಿದರು. ರಾಜ್ಯ ಸರಕಾರ ಎಷ್ಟು ಹಣ ಬಿಡುಗಡೆ ಮಾಡಲಿದೆ?. ಯಾವಾಗ ಹೊಂಡಗುಂಡಿ ಮುಚ್ಚುತ್ತೀರಿ? ಎಂದ ಅವರು, ಕುಡಿಯುವ ನೀರಿಲ್ಲದೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿನ ಮಾನ ಮರ್ಯಾದೆ ಹರಾಜಾಗಿದೆ ಎಂದು ಹೇಳಿದರು.

ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಎಷ್ಟು ಹಣ ನೀಡಿದ್ದೀರಿ?. ಬಿಲ್ ಸಿಗದೆ ಕಸ ತೆಗೆಯುವವರು ಸಮಸ್ಯೆಯಲ್ಲಿದ್ದಾರೆ. ರಾಶಿ ರಾಶಿ ಕಸ ಬಿದ್ದಿದೆ. ಬೆಂಗಳೂರಿನ ತೆರಿಗೆ ನಮ್ಮ ಹಕ್ಕು ಎಂದು ಇಲ್ಲಿನ ಜನರೂ ಕೇಳುತ್ತಿದ್ದಾರೆ ಎಂದು ತಿಳಿಸಿದರು.

ವಾರ್ತಾ ಭಾರತಿ ವಾಟ್ಸ್ ಆ್ಯಪ್ ಚಾನೆಲ್ ಗೆ ಸೇರಲು https://whatsapp.com/channel/0029VaA8ju86LwHn9OQpEq28 ಈ ಲಿಂಕ್ ಕ್ಲಿಕ್ ಮಾಡಿ, Follow ಮಾಡುವ ಮೂಲಕ ಕ್ಷಣಕ್ಷಣದ ಅಪ್ಡೇಟ್ ಪಡೆಯಿರಿ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News