ಪರಿಶಿಷ್ಟ ಜಾತಿ, ಪಂಗಡದ ಗುತ್ತಿಗೆದಾರರಿಗೆ 1 ಕೋಟಿ ರೂ.ವರೆಗೆ ಕಾಮಗಾರಿ ಮೊತ್ತ ಹೆಚ್ಚಳಗೊಳಿಸಿದ ರಾಜ್ಯ ಸರಕಾರ
Update: 2023-10-20 17:46 GMT
ಬೆಂಗಳೂರು, ಅ.20: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ ಶೇ.24.10ರಷ್ಟು ಮೀಸಲಾತಿ ನಿಗದಿಪಡಿಸಿರುವ ಕಾಮಗಾರಿಗಳ ಮೊತ್ತವನ್ನು 50 ಲಕ್ಷ ರೂ.ಗಳಿಂದ 1 ಕೋಟಿ ರೂ.ವರೆಗೆ ಹೆಚ್ಚಳಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಒಂದು ಕೋಟಿ ರೂ.ಗಳವರೆಗಿನ ಕಾಮಗಾರಿಗಳಲ್ಲಿ ಪರಿಶಿಷ್ಟ ಜಾತಿಯ ಗುತ್ತಿಗೆದಾರರಿಗೆ ಶೇ.17.15ರಷ್ಟು ಮತ್ತು ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ ಶೇ.6.95ರಷ್ಟು ಮೀಸಲಾತಿ ನಿಗದಿಪಡಿಸಿ ಕಾಮಗಾರಿಗಳನ್ನು ಅನುಷ್ಟಾನಗೊಳಿಸಲು ಕ್ರಮ ವಹಿಸುವಂತೆ ಸರಕಾರದ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ಆದೇಶದಲ್ಲಿ ತಿಳಿಸಿದ್ದಾರೆ.